ಶೆಟ್ಟರ್ ಮರಳಿ ಗೂಡಿಗೆ : ಕಾಂಗ್ರೆಸ್ ಗೆ ಗುಡ್ ಬೈ ಹೇಳಿ ಮರಳಿ ಬಿಜೆಪಿಗೆ ಸೇರ್ಪಡೆಯಾದ ಶೆಟ್ಟರ್.

ಶೆಟ್ಟರ್ ಮರಳಿ ಗೂಡಿಗೆ : ಕಾಂಗ್ರೆಸ್ ಗೆ ಗುಡ್ ಬೈ ಹೇಳಿ ಮರಳಿ ಬಿಜೆಪಿಗೆ ಸೇರ್ಪಡೆಯಾದ ಶೆಟ್ಟರ್.

ನವದೆಹಲಿ: ರಾಜ್ಯದ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಯಾಗಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಗುರುವಾರ ಮರಳಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.

ಲೋಕ ಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಕೇಂದ್ರ ಹಿರಿಯ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಅವರು ಬಿಜೆಪಿ ಸೇರುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.
ಅದರಂತೆ ಗುರುವಾರ ನವದೆಹಲಿಯ ಬಿಜೆಪಿ ಕಚೇರಿಯಲ್ಲಿ ಹಿರಿಯ ನಾಯಕರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.

ರಾಜ್ಯ