
ಕರಿಕೆ ಭಾಗಮಂಡಲ ರಸ್ತೆ ಅಭಿವೃದ್ದಿಗೆ 12 ಕೋಟಿ ಅನುದಾನ ಶೀಘ್ರದಲ್ಲೆ ಟೆಂಡರ್ ಪ್ರಕ್ರಿಯೆ ನಡೆದು ಕಾಮಗಾರಿಗಳು ಆರಂಭವಾಗಲಿದೆ, ರಸ್ತೆ , ಶಾಲೆ , ಅಂಗನವಾಡಿ ಬಸ್ ತಂಗುದಾಣವನ್ನು ಮೇಲ್ದರ್ಜೆಗೇರಿಸುವುದರ ಮೂಲಕ ಹಂತ ಹಂತವಾಗಿ ಕರಿಕೆ ಗ್ರಾಮವನ್ನು ಅಭಿವೃದ್ಧಿ ಪಡಿಸಿ ಮಾದರಿ ಗ್ರಾಮವನ್ನಾಗಿಸುವ ಗುರಿ ಹೊಂದಿದ್ದೇವೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಎ.ಎಸ್.ಪೊನ್ನಣ್ಣ ಹೇಳಿದ್ದಾರೆ. ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ, ಜಿಲ್ಲಾ ಮತ್ತು ಮಡಿಕೇರಿ ತಾಲ್ಲೂಕು ಕಸಾಪ, ಭಾಗಮಂಡಲ ಹೋಬಳಿ ಕಸಾಪ ಮತ್ತು ಗ್ರಾಮ ಪಂಚಾಯ್ತಿಗಳ ಸಹಯೋಗದೊಂದಿಗೆ ಗಡಿ ಗ್ರಾಮ ಕರಿಕೆ ಎಳ್ಳುಕೊಚ್ಚಿಯ ಬೇಕಲ್ ಉಗ್ಗಪ್ಪ ನಗರದಲ್ಲಿ ನಡೆದ ಗಡಿ ಉತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.


ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಾಜೀ ಅದ್ಯಕ್ಷ ಟಿ ಪಿ ರಮೇಶ್ ಮಾತನಾಡಿ ಗಡಿ ಗ್ರಾಮಗಳಲ್ಲಿ ಕನ್ನಡ ನಾಮಫಲಕ ಅಳವಡಿಸುವುದರ ಮೂಲಕ ಕನ್ನಡಕ್ಕೆ ಒತ್ತು ನೀಡುವ ಕೆಲಸವಾಗಬೇಕು, ಗಡಿನಾಡ ಕನ್ನಡಿಗರ ಸಮಸ್ಯೆಗಳನ್ನು ನಿವಾರಿಸುವಲ್ಲಿ ಆಧ್ಯತೆ ನೀಡಬೇಕು, ಸರಕಾರದ ಪತ್ರ ವ್ಯವಹಾರವನ್ನು ಕನ್ನಡದಲ್ಲೆ ನಡೆಸುವುದರ ಜೊತೆಗೆ ಕನ್ನಡೇತರರಿಗೆ ಕನ್ನಡ ಕಲಿಸುವ ಕೆಲಸವಾಗಬೇಕು, ಅಲ್ಲದೆ ಗ್ರಾಮದ ಸ್ಥಳಿಯ ಸಮಸ್ಯೆಗಳನ್ನು ವಿವರಿಸಿ ಪರಿಹರಿಸಲು ಒತ್ತಾಯಿಸಿದರು.ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೇಶವ ಕಾಮತ್ ವಹಿಸಿದ್ದರು.
ಕೊಡಗು ಜಿಲ್ಲಾ ಅಪರ ಜಿಲ್ಲಾಧಿಕಾರಿ ವೆಂಕಟರಾಜು, ಕೊಡಗು ಜಿ. ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವರ್ಣಿತ್ ನೇಗಿ, ತಾಲೂಕು ಕಸಾಪ ಅಧ್ಯಕ್ಷೆ ಕಡ್ಲೇರ ತುಳಸಿ ಮೋಹನ್, ಕರಿಕೆ ಗ್ರಾಮ ಪಂಚಾಯತ್ ಅಧ್ಯಕ್ಷ ಎನ್.ಬಾಲಚಂದ್ರನ್ ನಾಯರ್
, ಉಪಾಧ್ಯಕ್ಷೆ ಕಲ್ಪನಾ ಜಗದೀಶ್, ಕರಿಕೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಬೇಕಲ್ ಡಿ ದೇವರಾಜ್, ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿ ಬಿ.ಎಸ್.ರಮಾನಾಥ, ಪ್ರಚಾರ ಮತ್ತು ಮಾಧ್ಯಮ ಸಮಿತಿಯ ಅಧ್ಯಕ್ಷ ಬೇಕಲ್ ಡಿ ಹರಿಪ್ರಸಾದ್ ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು.
