ಬೆಳ್ತಂಗಡಿ; ಸುಡುಮದ್ದು ತಯಾರಿಸುವ ಘಟಕದಲ್ಲಿ ಸ್ಫೋಟ; ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ.

ಬೆಳ್ತಂಗಡಿ; ಸುಡುಮದ್ದು ತಯಾರಿಸುವ ಘಟಕದಲ್ಲಿ ಸ್ಫೋಟ; ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ.

ಬೆಳ್ತಂಗಡಿ; ಸುಡುಮದ್ದು ತಯಾರಿಸುವ ಘಟಕದಲ್ಲಿ ಸ್ಫೋಟ; ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ
ಬೆಳ್ತಂಗಡಿ: ಕುಕ್ಕೇಡಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಸುಡುಮದ್ದು ತಯಾರಿಸುವ ಘಟಕದಲ್ಲಿ ಸ್ಫೋಟಗೊಂಡು ಕನಿಷ್ಠ ಇಬ್ಬರು ಮೃತಪಟ್ಟಿರುವ ಘಟನೆ ರವಿವಾರ ನಡೆದಿದೆ.ಸ್ಫೋಟದ ತೀವ್ರತೆಗೆ ದೇಹಗಳು ಚಿದ್ರಗೊಂಡಿರುವುದಾಗಿ ತಿಳಿದು ಬಂದಿದೆ.
ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿರುವುದಾಗಿ ತಿಳಿದು ಬಂದಿದೆ.
ವೇಣೂರು ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಇಬ್ಬರು ಸಾವನ್ನಪ್ಪಿರುವುದಾಗಿ ಪ್ರಾಥಮಿಕ ಮಾಹಿತಿಗಳು ಲಭ್ಯವಾಗುತ್ತಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಿದೆ

ರಾಜ್ಯ