
ಹಲವು ಕಾರಣಾಂತರಗಳಿಂದ ಮುಂದೂಡಲಾಗಿದ್ದ ಕಾಂಗ್ರೆಸ್ ಕಾರ್ಯಕರ್ತರ ರಾಜ್ಯಮಟ್ಟದ ಸಮಾವೇಶವನ್ನು ಫೆಬ್ರವರಿ 17ರಂದು ಮಂಗಳೂರಿನಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ, ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಬುಧವಾರ ಸುದ್ದಿಗಾರ ರೊಂದಿಗೆ ಮಾತನಾಡಿ, ಈ ಮೊದಲು ಜನವರಿ 21ರಂದೇ ಕಾರ್ಯಕರ್ತರ ಬೃಹತ್ ಸಮಾವೇಶ ನಡೆಸಲು ದಿನಾಂಕ ನಿಗದಿಪಡಿಸಲಾಗಿತ್ತು. ಆದರೆ ಕಾರಣಾಂತರ ಗಳಿಂದ ಮುಂದೂಡಿದ್ದೆವು. ಈಗ ಸಮಾವೇಶಕ್ಕೆ ಹೊಸ ದಿನಾಂಕ ನಿಗದಿ ಮಾಡಿ ದ್ದೇವೆ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಬೃಹತ್ ಸಮಾವೇಶ ನಡೆಯಲಿದೆ.
ರಾಜ್ಯದ ಎಲ್ಲ ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆ ಯಲ್ಲಿ ಪಕ್ಷದ ಕಾರ್ಯಕರ್ತರು ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರನ್ನು ಸಜ್ಜುಗೊಳಿಸಲು ಈ ಸಮಾವೇಶ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದರು.