ಭಾರತೀಯ ಜನತಾ ಪಕ್ಷದ ಬೆಳ್ತಂಗಡಿ ಮಂಡಲ ಅಧ್ಯಕ್ಷರಾಗಿ ಧರ್ಮಸ್ಥಳ ಗ್ರಾ.ಪಂ. ಉಪಾಧ್ಯಕ್ಷ, ಸಂಘಟಕ ಶ್ರೀನಿವಾಸ್ ರಾವ್ ಧರ್ಮಸ್ಥಳ ನೇಮಕ

ಭಾರತೀಯ ಜನತಾ ಪಕ್ಷದ ಬೆಳ್ತಂಗಡಿ ಮಂಡಲ ಅಧ್ಯಕ್ಷರಾಗಿ ಧರ್ಮಸ್ಥಳ ಗ್ರಾ.ಪಂ. ಉಪಾಧ್ಯಕ್ಷ, ಸಂಘಟಕ ಶ್ರೀನಿವಾಸ್ ರಾವ್ ಧರ್ಮಸ್ಥಳ ನೇಮಕ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿಯ ಬೆಳ್ತಂಗಡಿ ಮಂಡಲದ ಅಧ್ಯಕ್ಷರಾಗಿ ಧರ್ಮಸ್ಥಳ ಗ್ರಾಮ ಪಂಚಾಯತ್ ಉಪಾಧ್ಯಕ್ಷ, ಸಂಘಟಕ ಶ್ರೀನಿವಾಸ್ ರಾವ್ ಅವರನ್ನು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲರವರು ನೇಮಕ ಮಾಡಿದ್ದಾರೆ.

ಶ್ರೀನಿವಾಸ್ ರಾವ್ ಅವರು ಬಿಜೆಪಿ ಧರ್ಮಸ್ಥಳ ಗ್ರಾಮ ಸಮಿತಿಯಲ್ಲಿ 15 ವರ್ಷಗಳ ಕಾಲ ಸೇವೆ ಸಲ್ಲಿಸಿ, ಧರ್ಮಸ್ಥಳ ಪಂಚಾಯತ್ ಸದಸ್ಯರಾಗಿ, ಬೆಳ್ತಂಗಡಿ ಬಿಜೆಪಿ ಯುವಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ, ಬಿಜೆಪಿ ಬೆಳ್ತಂಗಡಿ ಮಂಡಲದ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿ, ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ರಾಜ್ಯ