
ಸಂಪಾಜೆ ಗ್ರಾಮದ ಗೂನಡ್ಕದ ಪೆಲ್ತಡ್ಕ ಬಳಿ ನಡೆದ ಅಪಘಾತದಲ್ಲಿ ಟ್ಯಾಂಕರ್ ಹಾಗೂ ಕಾರು ಡಿಕ್ಕಿಯಾಗಿ ಕಾರು ಜಖಂಗೊಂಡ ಘಟನೆ ಇಂದು ನಡೆದಿದೆ.


ಮಂಗಳೂರಿನಿಂದ ಕುಶಾಲನಗರಕ್ಕೆ ಹೋಗುತ್ತಿದ್ದ ಟ್ಯಾಂಕರ್ ಹಾಗೂ ಮಡಿಕೇರಿ ಕಡೆಯಿಂದ ಕಾಸರಗೋಡು ಕಡೆಗೆ ಬರುತ್ತಿದ್ದ ಸ್ವಿಫ್ಟ್ ಕಾರು ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಕಾರು ನುಜ್ಜುಗುಜ್ಜಾಗಿದ್ದು ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.