
ಉಡುಪಿ: ಹದಿನಾರು ಕೆಜಿಗಳಷ್ಟು ತಿಮಿಂಗಿಲ ವಾಂತಿಯನ್ನು ಸಾಗಣೆ ಮಾಡುತ್ತಿದ್ದ ನಾಲ್ವರನ್ನು ಕೊಳ್ಳೆಗಾಲ ನಗರದ ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಉಡುಪಿ ಮೂಲದ ಇಮ್ಮಿಯಾಜ್ ಅಬ್ದುಲ್ ರೆಹಮಾನ್, ಮಂಗಳೂರು ನಗರದ ನಿವಾಸಿ ಚೇತನ್ ಕುಮಾರ್, ಉಳ್ಳಾಲ ಗ್ರಾಮದ ಶೇಷಪ್ಪ, ಸುರತ್ಕಲ್ ನಿವಾಸಿ ವೆಂಕಟೇಶ್ ಎಂದು ಗುರುತಿಸಲಾಗಿದೆ.
ತಮಿಳುನಾಡಿನ ಸೇಲಂ ಕಾಳಸಂತೆಯಲ್ಲಿ ಮಾರಾಟ ಮಾಡಲು ಅಂಬರ್ ಗ್ರೀಸನ್ನು ಸಾಗಿಸುವ ವೇಳೆ ಟೀ ಕುಡಿಯಲು ಕೊಳ್ಳೆಗಾಲ ತಾಲ್ಲೂಕಿನ ಸತ್ತೇಗಾಲ ಗ್ರಾಮದ ಹ್ಯಾಂಡ್ ಪೋಸ್ಟ್ ಬಳಿ ನಿಂತಿದ್ದರು. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿ, ಅವರ ಬಳಿ ಇದ್ದ ತಿಮಿಂಗಲ ವಾಂತಿ, ಮೊಬೈಲ್ ಫೋನ್, ಕಾರು ವಶಪಡಿಸಿಕೊಂಡಿದ್ದಾರೆ.
ಆರೋಪಿಗಳ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ಕಾರ್ಯಾಚರಣೆಯಲ್ಲಿ ಅರಣ್ಯ ಸಂಚಾರಿ ದಳದ ಸಿಬ್ಬಂದಿಗಳು ಭಾಗವಹಿಸಿದ್ದರು
