ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬೆಂಗಳೂರಿನಲ್ಲಿ ಬಂಧಿಸಿದ ಬಂಟ್ವಾಳ ಗ್ರಾಮಾಂತರ ಪೊಲೀಸರು

ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬೆಂಗಳೂರಿನಲ್ಲಿ ಬಂಧಿಸಿದ ಬಂಟ್ವಾಳ ಗ್ರಾಮಾಂತರ ಪೊಲೀಸರು

ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬೆಂಗಳೂರಿನಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ಮಂಚಿ ಗ್ರಾಮದ ಕುಕ್ಕಾಜೆ ನಿವಾಸಿ ಮುಹಮ್ಮದ್ ಸಮೀವುಲ್ಲಾ (34) ಹಾಗೂ ಮಂಚಿ ಗ್ರಾಮದ ಕಂಚಿಲ ನಿವಾಸಿ ಇಬ್ರಾಹಿಂ (35) ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ 04/2004 ಕಲಂ: 147,148,504,447,427, 435, 324,326,307,506 r/w 149 IPC ಪ್ರಕರಣ ದಾಖಲಾಗಿದ್ದು ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದು, ಆರೋಪಿಗಳನ್ನು ಸೋಮವಾರ (ಫೆ 12) ಪಿಎಸ್ಸೆ ಮೂರ್ತಿ ಹಾಗೂ ಸಿಬ್ಬಂದಿಗಳಾದ ಕೃಷ್ಣ, ಯೋಗೇಶ್ ಡಿ ಎಲ್, ಪುನೀತ್ ಅವರ ತಂಡ ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನದ ವಿಧಿಸಿದೆ ಎಂದು ತಿಳಿದು ಬಂದಿದೆ.

ರಾಜ್ಯ