ಸುಳ್ಯ: ಪಟಾಕಿ ಸಿಡಿದು ವ್ಯಕ್ತಿಗೆ ಗಂಭೀರ ಗಾಯ

ಸುಳ್ಯ: ಪಟಾಕಿ ಸಿಡಿದು ವ್ಯಕ್ತಿಗೆ ಗಂಭೀರ ಗಾಯ

ಸುಳ್ಯ: ಕನಕಮಜಲಿನಲ್ಲಿ ಪಟಾಕಿ ಸಿಡಿಸುವ ವೇಳೆ ವ್ಯಕ್ತಿಯೋರ್ವರ ಕೈಯಲ್ಲಿ ಪಟಾಕಿ ಸಿಡಿದು ಗಂಭೀರ ಗಾಯಗೊಂಡ ಘಟನೆ ಮಂಗಳವಾರ ಸಂಭವಿಸಿದೆ.

ಕನಕಮಜಲಿನ ಶ್ರೀ ಆತ್ಮಾರಾಮ ಭಜನ ಮಂದಿರದಲ್ಲಿ ಏಕಾಹ ಭಜನೆ ಮಂಗಳವಾರ ನಡೆಯುತ್ತಿತ್ತು. ಈ ವೇಳೆ ಗ್ರಾಮದ ಗಬ್ಬಲಡ್ಕ ಚಂದ್ರಶೇಖರ ಅವರು ಪಟಾಕಿಯೊಂದನ್ನು ಸಿಡಿಸುವ ವೇಳೆ ಕೈಯಲ್ಲೇ ಸ್ಫೋಟಗೊಂಡಿದ್ದು ಕೈಯ ಬೆರಳುಗಳಿಗೆ ಗಂಭೀರವಾಗಿ ಗಾಯವಾಗಿದೆ. ತತ್‌ಕ್ಷಣ ಸ್ಥಳೀಯರು ಸೇರಿ ಅವರನ್ನು ಸುಳ್ಯದ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ.

ರಾಜ್ಯ