ಕಾಪು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್..!

ಕಾಪು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್..!

ಕಾಪು: ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾರೆಂಟ್ ಜಾರಿಯಾಗಿದ್ದರೂ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಾಪು ಪೊಲೀಸರು ಪಡುಬಿದ್ರಿಯಲ್ಲಿ ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಬೈಂದೂರು ನಾವುಂದ ಬಡಾಕೆರೆ ಮುಸ್ಲಿಂ ಕೇರಿ ನಿವಾಸಿ ಮೊಹಮ್ಮದ್‌ ಆಸಿಫ್‌ ಯಾನೆ ಆಸಿಫ್‌(38) ಎಂದು ಗುರುತಿಸಲಾಗಿದೆ.ಇತನನ್ನು ಪಡುಬಿದ್ರಿ ನಡ್ಪಾಲು ಗ್ರಾಮದ ಸುಜ್ಲಾನ್‌ ಬಳಿ ಪೊಲೀಸರು ಬಂಧಿಸಿದ್ದಾರೆ. ಈತನ ವಿರುದ್ಧ ಬೈಂದೂರು, ಗಂಗೊಳ್ಳಿ, ಮಂಗಳೂರು ಕಂಕನಾಡಿ ಗ್ರಾಮಾಂತರ ಪೊಲೀಸ್‌ ಠಾಣೆ ಮತ್ತು ಉಪ್ಪಿನಂಗಡಿ ಪೊಲೀಸ್‌ ಠಾಣೆಗಳ ಪ್ರಕರಣಗಳಿಗೆ ಸಂಬಂಧಿಸಿ ವಾರಂಟ್‌ ಜಾರಿಯಾಗಿತ್ತು. ಕಾಪು ಎಸ್‌ಐ ಅಬ್ದುಲ್‌ ಖಾದರ್‌ ಅವರ ಮಾರ್ಗದರ್ಶನದಂತೆ ಸಿಬಂದಿ ವರ್ಗದ ನಾರಾಯಣ ಮತ್ತು ರಫೀಕ್‌ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ರಾಜ್ಯ