
ಮಂಗಳೂರು : ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 46 ಲಕ್ಷ ರೂ ಮೌಲ್ಯದ ಚಿನ್ನಾಭರಣವನ್ನು ಅಕ್ರಮ ವಾಗಿ ಸಾಗಿಸುತ್ತಿದ್ದ ಪ್ರಯಾಣಿಕನನ್ನು ಅಧಿಕಾರಿಗಳು ಮಾರ್ಚ್ 3 , ಭಾನುವಾರ ಬಂಧಿಸಿದ್ದಾರೆ.


ಅಬುಧಾಬಿಯಿಂದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದಲ್ಲಿ ಆಗಮಿಸಿದ ಕಾಸರಗೋಡು ಮೂಲದ ಪ್ರಯಾಣಿಕರೊಬ್ಬರು ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದರು. ಸಂಶಯದ ಮೇಲೆ ಪ್ರಯಾಣಿಕನ್ನು ಪರಿಶೀಲನೆ ನಡೆಸಿದ ವೇಳೆ ಆರೋಪಿ ಸಿಕ್ಕಬಿದ್ದಿದ್ದಾನೆ, ಮಾರ್ಚ್ 3ರಂದು ಕಾಸರಗೋಡು ಮೂಲದ ವ್ಯಕ್ತಿ ವಿಮಾನ ನಿಲ್ದಾಣಕ್ಕೆ ಬಂದಿದ್ದ. ಆತನನ್ನು ಕಸ್ಟಮ್ಸ್ ಅಧಿಕಾರಿಗಳು ಪರೀಕ್ಷೆಗೆ ಒಳಪಡಿಸಿದರು. ಇದೇ ವೇಳೆ, ಆತ ಮೂರು ಮೊಟ್ಟೆಯ ಆಕಾರದ ಲಕೋಟೆಗಳಲ್ಲಿ ಚಿನ್ನವನ್ನು ಪೇಸ್ಟ್ ರೂಪದಲ್ಲಿ ಗುದನಾಳದಲ್ಲಿ ಬಚ್ಚಿಟ್ಟಿರುವುದು ಪತ್ತೆಯಾಗಿದೆ.
ಕಸ್ಟಮ್ಸ್ ಅಧಿಕಾರಿಗಳು ಚಿನ್ನವನ್ನು ವಶಪಡಿಸಿಕೊಂಡು, ನಂತರ ಆತನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಒಟ್ಟು 729 ಗ್ರಾಂ ತೂಕದ 45,92,700 ರೂಪಾಯಿ ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ
