ಕಾಪು  : ಡಿವೈಡರ್ ಹಾರಿ ಕಂದಕಕ್ಕೆ ಉರುಳಿ ಬಿದ್ದ ಕಾರು

ಕಾಪು : ಡಿವೈಡರ್ ಹಾರಿ ಕಂದಕಕ್ಕೆ ಉರುಳಿ ಬಿದ್ದ ಕಾರು

ಕಾಪು: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಡಿವೈಡರ್ ಹಾರಿ ಕಂದಕಕ್ಕೆ ಕಾರು ಉರುಳಿ ಬಿದ್ದಿರುವ ಘಟನೆ ಕಟಪಾಡಿ ರಾ.ಹೆ.66 ರ ಕಲ್ಲಾಪುವಿನಲ್ಲಿ ನಡೆದಿದೆ.

ಉಡುಪಿಯಿಂದ ಮಂಗಳೂರಿನತ್ತ ತೆರಳುತ್ತಿದ್ದ ಗುಜರಾತ್ ನೋಂದಣಿಯ ಕಾರು ನಿಯಂತ್ರಣ ಕಳೆದುಕೊಂಡು ಡಿವೈಡರ್ ಹಾರಿ ಹೆದ್ದಾರಿಯ ಪಶ್ಚಿಮ ಪಾರ್ಶ್ವದ ಹೆದ್ದಾರಿಗೆ ಧುಮುಕಿದ್ದು ಬಳಿಕ ಹೆದ್ದಾರಿ ಬದಿಯ ಮೋರಿಗೆ ಬಿದ್ದಿದೆ.

ಪರಿಣಾಮ ಕಾರು ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದು, ಕಾರು ಜಖಂಗೊಂಡಿದೆ.ಈ ಸಂದರ್ಭದಲ್ಲಿ ಯಾವುದೇ ವಾಹನ ಅಥವಾ ಜನ ಸಂಚಾರವಿಲ್ಲದ ಕಾರಣ ಸಂಭಾವ್ಯ ಹೆಚ್ಚಿನ ಅನಾಹುತ ತಪ್ಪಿದ್ದು, ಕಾರು ಜಖಂಗೊಂಡಿದೆ. ಸ್ಥಳೀಯರು ಗಾಯಾಳು ಚಾಲಕನನ್ನು ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ. ಕಾಪು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯ