ಶಿರಾಡಿ ಘಾಟಿಯಲ್ಲಿ ಗ್ಯಾಸ್‌ ಟ್ಯಾಂಕರ್‌ ಪಲ್ಟಿಯಾಗಿ ಗ್ಯಾಸ್‌ ಸೋರಿಕೆ; ಸಂಚಾರ ಬಂದ್..!

ಶಿರಾಡಿ ಘಾಟಿಯಲ್ಲಿ ಗ್ಯಾಸ್‌ ಟ್ಯಾಂಕರ್‌ ಪಲ್ಟಿಯಾಗಿ ಗ್ಯಾಸ್‌ ಸೋರಿಕೆ; ಸಂಚಾರ ಬಂದ್..!

ಮಂಗಳೂರು ಮತ್ತು ಬೆಂಗಳೂರನ್ನು ಸಂಪರ್ಕಿಸುವ ಶಿರಾಡಿ ಘಾಟಿಯಲ್ಲಿ ಗ್ಯಾಸ್‌ ಟ್ಯಾಂಕರ್‌ ಒಂದು ಉರುಳಿ ಬಿದ್ದಿದ್ದು, ಗ್ಯಾಸ್‌ ಸೋರಿಕೆ ಆರಂಭಗೊಂಡಿದೆ. ಇದರಿಂದ ಅಪಾಯವಾಗುವ ಸಾಧ್ಯತೆ ಇರುವುದರಿಂದ ರಸ್ತೆ ಸಂಚಾರವನ್ನು ಬಂದ್‌ ಮಾಡಲಾಗಿದೆ.

ರಾಷ್ಟ್ರೀಯ ಹೆದ್ದಾರಿ -75ರಲ್ಲಿ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಶಿರಾಡಿ ಘಾಟ್ ರಸ್ತೆಯ ಡಬಲ್ ಕ್ರಾಸ್ ಬಳಿ ತಿರುವಿನಲ್ಲಿ ಚಾಲಕನ ನಿಯಂತ್ರಣ ಸಿಗದೆ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿದೆ. ಟ್ಯಾಂಕ‌ರ್‌ನಿಂದ ಗ್ಯಾಸ್ ಸೋರಿಕೆಯಾಗುತ್ತಿರುವುದರಿಂದ ಸ್ಥಳಕ್ಕೆ ಅಗ್ನಿಶಾಮಕದಳದ ಸಿಬ್ಬಂದಿ ಮತ್ತು ಪೊಲೀಸರು ದೌಡಾಯಿಸಿದ್ದಾರೆ.

ಗ್ಯಾಸ್ ಸೋರಿಕೆಯಾಗುತ್ತಿರುವುದರಿಂದ ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ತಡೆ ಹಿಡಿಯಲಾಗಿದೆ. ಹೀಗಾಗಿ ಭಾರಿ ಪ್ರಮಾಣದಲ್ಲಿ ವಾಹನಗಳು ಶಿರಾಡಿ ಘಾಟಿಯಲ್ಲಿ ಹಿಂದೆ ಮುಂದೆ ಚಲಿಸಲಾಗದೆ ಸಿಕ್ಕಿಬಿದ್ದಿವೆ.ಈಗ ಪೊಲೀಸರು ಮಂಗಳೂರು-ಹಾಸನ-ಬೆಂಗಳೂರು ಮಾರ್ಗದಲ್ಲಿ ಸಂಚರಿಸುವ ವಾಹನಗಳನ್ನು ಬದಲಿ ಮಾರ್ಗದಲ್ಲಿ ಕಳುಹಿಸುತ್ತಿದ್ದಾರೆ.ಮಂಗಳೂರು ಧರ್ಮಸ್ಥಳಕ್ಕೆ ತೆರಳುವವರು ಹಾನುಬಾಳು ಮಾರ್ಗವಾಗಿ ಮೂಡಿಗೆರೆ ಮೂಲಕ ತೆರಳಲು ಸೂಚನೆ ನೀಡಲಾಗಿದೆ.ಮಂಗಳೂರಿನಿಂದ ಹಾಸನ ಬೆಂಗಳೂರಿಗೆ ತೆರಳುವವರು ಗುಂಡ್ಯ ಮಾರ್ಗವಾಗಿ ತೆರಳಲು ಸೂಚನೆ ನೀಡಲಾಗಿದೆ.ಗ್ಯಾಸ್ ಟ್ಯಾಂಕರ್ ತೆರವು ಕಾರ್ಯಾಚರಣೆ ಮುಗಿಯುವವರೆಗೂ ಎಲ್ಲಾ ವಾಹನಗಳ ಸಂಚಾರ ಬಂದ್ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜ್ಯ