ಲೋಕಸಭಾ ಚುನಾವಣೆ ದಿನಾಂಕ ನಾಳೆ ಪ್ರಕಟ | ಮಾ. 16ರಿಂದಲೇ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆ ದಿನಾಂಕ ನಾಳೆ ಪ್ರಕಟ | ಮಾ. 16ರಿಂದಲೇ ನೀತಿ ಸಂಹಿತೆ ಜಾರಿ

ನವದೆಹಲಿ: ಮಾ.16 ಶನಿವಾರ ಮಧ್ಯಾಹ್ನ ಲೋಕಸಭಾ ಚುನಾವಣಾ ದಿನಾಂಕ ಪ್ರಕಟಿಸಲು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಿದೆ.ಈ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗವು ಶನಿವಾರ ಮಧ್ಯಾಹ್ನ 3 ಗಂಟೆಗೆ ದೆಹಲಿಯ ವಿಜ್ಞಾನ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಲಾಗುವುದು ಎಂದು ಚುನಾವಣಾ ಆಯೋಗವು ಪ್ರಕಟಣೆಯಲ್ಲಿ ತಿಳಿಸಿದೆ.

ಚುನಾವಣೆಗೆ ಆಯೋಗವು ಸಿದ್ಧತೆಯಲ್ಲಿ ತೊಡಗಿದ್ದು, ಗುರುವಾರವಷ್ಟೆ, ಇಬ್ಬರು ಆಯುಕ್ತರನ್ನು ನೇಮಕ ಮಾಡಿತ್ತು. ಇಬ್ಬರು ನೂತನ ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ಮತ್ತು ಸುಖ್‌ಬೀರ್ ಸಿಂಗ್ ಸಂಧು ಶುಕ್ರವಾರ ಅಧಿಕಾರ ಸ್ವೀಕರಿಸಿದ್ದಾರೆ

ರಾಜ್ಯ