
ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಾಪೋಕ್ಲುವಿನ ನಾಲಡಿ ಗ್ರಾಮದ ತೋಡುಕೆರೆ ಎಂಬಲ್ಲಿ ನಡೆದಿದೆ.

ಗ್ರಾಮದ ನಿವಾಸಿ ಕಂಬೆಯಂಡ ರಾಜ ದೇವಯ್ಯ (59)ಮೃತ ದುರ್ದೈವಿ. ಬೆಳಗ್ಗೆ ತೋಟದಲ್ಲಿ ಕೆಲಸಕ್ಕೆಂದು ತೆರಳುತ್ತಿದ್ದ ಸಂದರ್ಭ ಘಟನೆ ಸಂಭವಿಸಿದೆ ಎನ್ನಲಾಗಿದೆ.ಸ್ಥಳಕ್ಕೆ ನಾಪೋಕ್ಲು ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ಭೇಟಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.
