ರಸ್ತೆ ಬಂದ್ ಮಾಡಿ ಮುಡಿಪು ಜಂಕ್ಷನ್ ರಸ್ತೆಯಲ್ಲೇ ಸೌಹಾರ್ದ ಇಫ್ತಾರ್ ಕೂಟ

ರಸ್ತೆ ಬಂದ್ ಮಾಡಿ ಮುಡಿಪು ಜಂಕ್ಷನ್ ರಸ್ತೆಯಲ್ಲೇ ಸೌಹಾರ್ದ ಇಫ್ತಾರ್ ಕೂಟ

ಮಂಗಳೂರು : ರಸ್ತೆಯನ್ನು ಬಂದ್ ಮಾಡಿ ಅಲ್ಲಿ ಇಫ್ತಾರ್ ಕೂಟ ಆಯೋಜನೆ ಮಾಡಿದ ಘಟನೆ ಮಂಗಳೂರಿನ ಮುಡಿಪು ಜಂಕ್ಷನ್ ನಲ್ಲಿ ನಡೆದಿದೆ. ದಕ್ಷಿಣಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಮುಡಿಪು ಜಂಕ್ಷನ್ನಲ್ಲಿ ಆಟೋ ರಾಜಕನ್ಮಾರ್ ಸಂಘಟನೆಯಿಂದ ಇಫ್ತಾರ್ ಕೂಟ ನಡೆಸಲಾಗಿದೆ.

ರಿಕ್ಷಾ ಚಾಲಕರೆಲ್ಲರೂ ಒಟ್ಟಾಗಿ ಸೇರಿಕೊಂಡು ನಡೆಸಿದ ಈ ಇಫ್ತಾರ್ ಕೂಟದಲ್ಲಿ ರಿಕ್ಷಾ ಚಾಲಕರು, ವರ್ತಕರು, ಸ್ಥಳೀಯರು ಭಾಗಿಯಾಗಿದ್ದಾರೆ.ಒಂದು ಭಾಗದ ರಸ್ತೆ ಮಧ್ಯೆ ಟೇಬಲ್, ಚಯರ್ ಇಟ್ಟು ಸಹಭೋಜನ ಮಾಡಲಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ಟೀಕೆ ವ್ಯಕ್ತಪಡಿಸಿದ್ದಾರೆ. ಅದಾಗ್ಯೂ, ಸ್ಥಳೀಯರಿಂದ ಯಾವುದೇ ವಿರೋಧ ವ್ಯಕ್ತವಾಗಿಲ್ಲ ಎಂದು ತಿಳಿದುಬಂದಿದೆ. ಈ ಹಿಂದೆ ಇಫ್ತಾರ್ ಕಾರ್ಯಕ್ರಮವನ್ನು ಸಭಾಂಗಣವೊಂದರಲ್ಲಿ ಆಯೋಜಿಸಲಾಗಿತ್ತು. ಆದರೆ ಹಿಂದೂ ಭಾಂದವರಿಗೆ ಭಾಗವಹಿಸಲು ಸಾಧ್ಯವಾಗದ ಕಾರಣ ಮುಡಿಪು ಜಂಕ್ಷನ್ಗೆ ಈ ಕಾರ್ಯಕ್ರಮವನ್ನು ಸ್ಥಳಾಂತರಿಸಲಾಗಿದೆ.

ರಸ್ತೆ ಬಂದ್ ಮಾಡಿ ಇಫ್ತಾರ್ ಕೂಟ ಆಯೋಜನೆ ಮಾಡಿದವರ ವಿರುದ್ಧ ಕ್ರಮಕ್ಕೆ ಒತ್ತಾಯ ಕೇಳಿ ಬಂದಿದ್ದು. ಸಾಮಾಜಿಕ ಜಾಲತಾಣದಲ್ಲಿ ಆಯೋಜಕರ ವಿರುದ್ಧ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಅತೀ ಜರೂರು ಆದ ಕಾರ್ಯಕ್ರಮವಲ್ಲದಿದ್ದರೂ ರಸ್ತೆಯಲ್ಲಿ ಆಯೋಜಿಸುವ ಉದ್ಧೇಶದ ಸಾರ್ವಜನಿಕರು ಪ್ರಶ್ನಿಸಿದ್ದಾರೆ.

ರಾಜ್ಯ