ಬೆಳ್ತಂಗಡಿ : ಆನ್‌ಲೈನ್‌ ಮೂಲಕ ಸಾಲ ನೀಡುವುದಾಗಿ ನಂಬಿಸಿ ವಂಚನೆ

ಬೆಳ್ತಂಗಡಿ : ಆನ್‌ಲೈನ್‌ ಮೂಲಕ ಸಾಲ ನೀಡುವುದಾಗಿ ನಂಬಿಸಿ ವಂಚನೆ

ಬೆಳ್ತಂಗಡಿ : ತೆಂಕಕಾರಂದೂರು ಗ್ರಾಮದ ಮಹಿಳೆಯೊಬ್ಬರಿಗೆ ಫೇಸ್‌ಬುಕ್‌ ಆಪ್‌ ಮೂಲಕ ಸಾಲ ನೀಡುವುದಾಗಿ ನಂಬಿಸಿ ವಂಚನೆ ನಡೆಸಲಾಗಿದೆ.

ನೆಬಿಸಾ (38) ಅವರು ವೇಣೂರು ಪೋಲಿಸ್‌ ಠಾಣೆಗೆ ನೀಡಿದ ದೂರಿನಂತೆ, ಮಾ. 21ರಂದು ಫೇಸ್‌ಬುಕ್‌ನಲ್ಲಿ ಮನಿ ವ್ಯೂ ಪರ್ಸನಲ್‌ ಲೋನ್‌ ಆ್ಯಪ್‌ ಮೂಲಕ ಅಪರಿಚಿತರು ಪರಿಚಯಿಸಿಕೊಂಡಿದ್ದರು. ನೆಬಿಸಾ ಅವರು ಸಾಲದ ಬಗ್ಗೆ ಅಪರಿಚಿತರಿಂದ ಮಾಹಿತಿ ಪಡೆದು 5 ಲಕ್ಷ ರೂ. ಸಾಲ ಪಡೆಯಲು ದಾಖಲೆಗಳನ್ನು ಕಳುಹಿಸಿದ್ದರು. ಬಳಿಕ ಫೋನ್‌ ಮೂಲಕ ನೆಬಿಸಾ ಅವರನ್ನು ಸಂಪರ್ಕಿಸಿ ಮಾ. 28ರ ತನಕ ವಿವಿಧ ಹಂತದಲ್ಲಿ ಒಟ್ಟು 96,743 ರೂ. ಹಣವನ್ನು ಆನ್‌ಲೈನ್‌ ಮೂಲಕ ವರ್ಗಾಯಿಸಿಕೊಂಡಿದ್ದಾರೆ. ಬಳಿಕ ಸಾಲವನ್ನು ನೀಡದೇ, ವರ್ಗಾಯಿಸಿಕೊಂಡ ಹಣವನ್ನು ಹಿಂತಿರುಗಿಸದೆ ವಂಚಿಸಿರುವುದಾಗಿ ತಿಳಿಸಲಾಗಿದೆ.

ರಾಜ್ಯ