
ಕೊಣಾಜೆ: ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ಉರುಮಣೆ ಬಳಿ ನಡೆದಿದೆ.

ಆತ್ಮಹತ್ಯೆಗೈದ ಯುವಕನನ್ನು ಸಫ್ವಾನ್ (24) ಎಂದು ಗುರುತಿಸಲಾಗಿದೆ. ಭಾನುವಾರ ಸಂಜೆ ಮನೆ ಮಂದಿ ಇಫ್ತಾರ್ ಕೂಟಕ್ಕೆ ತೆರಳಿದ್ದರು.ಈ ವೇಳೆ ಮನೆಯ ಕೊಠಡಿಯಲ್ಲಿ ಒಬ್ಬಂಟಿಯಾಗಿದ್ದ ಸಫ್ವಾನ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.ಈ ಬಗ್ಗೆ ಮನೆ ಮಂದಿ ನೀಡಿದ ದೂರಿನಂತೆ ಕೊಣಾಜೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
