
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ).ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ).ಸುಳ್ಯ ತಾಲೂಕು ಇದರ ಸಂಯುಕ್ತ ಆಶ್ರಯದಲ್ಲಿ ಸುಳ್ಯ ಯೋಜನಾ ಕಛೇರಿ ಸಭಾಂಗಣದಲ್ಲಿ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಶ್ರೀ ಲೋಕನಾಥ್ ಅಮೆಚೂರ್ ಇವರ ಅಧ್ಯಕ್ಷತೆಯಲ್ಲಿ ಹಾಗೂ ದ ಕ 2ಜಿಲ್ಲೆಯ ಗೌರವಾನ್ವಿತ ನಿರ್ದೇಶಕರಾದ ಶ್ರೀ ಪ್ರವೀಣ್ ಕುಮಾರ್ ಹಾಗೂ ನಿಕಟಪೂರ್ವ ಅಧ್ಯಕ್ಷರಾದಂತಹ ಶ್ರೀಮತಿ ವಿಮಲ ರಂಗಯ್ಯ, ಶ್ರೀ ಮಹೇಶ್ ರೈ ಮೇನಾಲ, ಶ್ರೀ ಭವಾನಿ ಶಂಕರ ಅಡ್ತಲೆ ಹಾಗೂ ಕ್ಷೇತ್ರ ಯೋಜನಾಧಿಕಾರಿಗಳಾದ ಶ್ರೀ ನಾಗೇಶ್ ಪಿ ಮತ್ತು ತಾಲೂಕು ಜನಜಾಗೃತಿ ವೇದಿಕೆಯ ಸದಸ್ಯರ ಗೌರವ ಉಪಸ್ಥಿತಿಯಲ್ಲಿ ಮದ್ಯಮುಕ್ತ ಚುನಾವಣೆಯನ್ನು ನಡೆಸುವ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಮದ್ಯಮುಕ್ತ ಚುನಾವಣೆಯ ಕರಪತ್ರವನ್ನು ತಾಲೂಕು ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷರಾದ ಶ್ರೀ N A ರಾಮಚಂದ್ರರವರು ಬಿಡುಗಡೆ ಮಾಡಿದರು.


ಕಾರ್ಯಕ್ರಮದಲ್ಲಿ ಉಡುಪಿ ಪ್ರಾದೇಶಿಕ ವಿಭಾಗದ ಜನಜಾಗೃತಿ ವೇದಿಕೆಯ ಯೋಜನಾಧಿಕಾರಿಗಳಾದ ಶ್ರೀ ಗಣೇಶ್ ಆಚಾರ್ಯ ಕರಪತ್ರದಲ್ಲಿನ ವಿವರವನ್ನು ಸಭೆಯಲ್ಲಿ ತಿಳಿಸಿದರುಈ ಸಂದರ್ಭದಲ್ಲಿ ತಾಲೂಕಿನ ಎಲ್ಲಾ ವಲಯದ ಜನಜಾಗೃತಿ ವಲಯಾದ್ಯಕ್ಷರು, ಮೇಲ್ವಿಚಾರಕರು, ನವಜೀವನ ಸಮಿತಿ ಪೋಷಕರು ಉಪಸ್ಥಿತಿ ಇದ್ದರು

