ಸಿಎಂ ಸಿದ್ದರಾಮಯ್ಯ ವಿರುದ್ಧವೇ ನಕಲಿ ಸುದ್ದಿ  ಸಾಮಾಜಿಕ ಜಾಲತಾಣದಲ್ಲಿ ರವಾನೆ.

ಸಿಎಂ ಸಿದ್ದರಾಮಯ್ಯ ವಿರುದ್ಧವೇ ನಕಲಿ ಸುದ್ದಿ  ಸಾಮಾಜಿಕ ಜಾಲತಾಣದಲ್ಲಿ ರವಾನೆ.

.

ಈ ಹಿಂದೆ  ಪ್ರಕರಣವೊಂದರಲ್ಲಿ ಭಾರೀ  ಸುದ್ದಿಯಾಗಿದ್ದ ಪತ್ರಕರ್ತ ವಸಂತ ಗಿಳಿಯಾರ್ ಸಹಿತ ಹಲವರ ಮೇಲೆ‌ ಸಿಎಂ ಸಿದ್ದರಾಮಯ್ಯ ದೂರು: ಪ್ರಕರಣ ದಾಖಲು

 

 ಪತ್ರಿಕೆಯೊಂದರ ಸುದ್ದಿಯಂತೆಯೇ  ಹೋಲುವ ನಕಲಿ ಸುದ್ದಿ ತುಣುಕೊಂದನ್ನು ಸೃಷ್ಟಿಸಿ, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಜನರು ನಂಬುವ ರೀತಿಯಲ್ಲಿಯೇ  ಸಿ ಎಂ ವಿರುದ್ದ ಜನ ಸಿಡದೇಳವಂತೆ ಪ್ರೇರೇಪಿಸುವ ನಕಲಿ ಸುದ್ದಿಯನ್ನು ಸೃಷ್ಠಿ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ ಪ್ರಕರಣಕ್ಕೆ ಸಂಭಂಧಿಸಿ ಹಲವರ ವಿರುದ್ದ ಸಿಎಂ ಸಿದ್ದರಾಮಯ್ಯ ದೂರು ದಾಖಲಿಸಿದ್ದಾರೆ. ಈ ಬಗ್ಗೆ ಸ್ವತಃ ಟ್ವೀಟ್ ಮಾಡಿರುವ ಅವರು 

ಪ್ರಭಾಕರ್ ರೆಡ್ಡಿ, ಪತ್ರಕರ್ತ ವಸಂತ ಗಿಳಿಯಾರ್, ವಿಜಯ್ ಹೆರಗು ಮುಂತಾದವರ ವಿರುದ್ಧ ದೂರು ದಾಖಲಾಗಿಸಲಾಗಿದೆ ಎಂದು ಬರೆದು ಕೊಂಡಿದ್ದಾರೆ.

 ಫೇಕ್ ನ್ಯೂಸ್‌ಗಳ ಸೃಷ್ಟಿ ಮತ್ತು ಹರಡುವಿಕೆಯನ್ನು ನಮ್ಮ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ.

.ಯಾರೂ ಕೂಡ ಅಂತಹ ಕಾನೂನುಬಾಹಿರ ಕೃತ್ಯಕ್ಕೆ ಕೈಹಾಕಬಾರದು ಎಂದು ಹಲವು ಬಾರಿ ಎಚ್ಚರಿಕೆಯನ್ನೂ ನೀಡಿದ್ದೆವು. ಆದರೂ ನನ್ನ ವಿರುದ್ಧವೇ ಸುಳ್ಳು ಸುದ್ದಿ ಸೃಷ್ಟಿಸಿ, ಜನರ ದಾರಿ ತಪ್ಪಿಸಲು ಯತ್ನಿಸಿದ್ದಾರೆ.

ಕಾನೂನಿನ ಮೂಲಕ ಈ ಪ್ರಕರಣವನ್ನು ತಾರ್ಕಿಕ ಅತ್ಯಂಕ್ಕೆ ಕೊಂಡೊಯ್ಯುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತನ್ನ ಅಧಿಕೃತ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಎಫ್ಐಆರ್ ಪ್ರತಿಯನ್ನು ಪ್ರಕಟಿಸಿದ್ದಾರೆ.

ರಾಜ್ಯ