ವಿಟ್ಲ: ಅನಿಲ ಕಟ್ಟೆ ಅರಣ್ಯ ಪ್ರದೇಶದಲ್ಲಿ ಬೆಂಕಿ ಅವಘಡ..!

ವಿಟ್ಲ: ಅನಿಲ ಕಟ್ಟೆ ಅರಣ್ಯ ಪ್ರದೇಶದಲ್ಲಿ ಬೆಂಕಿ ಅವಘಡ..!

ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡು ಗಿಡ ಮರಗಳು ಬೆಂಕಿಗಾಹುತಿಯಾದ ಘಟನೆ ವಿಟ್ಲ ಕಸಬಾ ಗ್ರಾಮದ ಕಡಂಬು ಅನಿಲ ಕಟ್ಟೆ ಎಂಬಲ್ಲಿ ನಡೆದಿದೆ.

ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸುತ್ತಿದ್ದಂತೆಯೇ ಸ್ಥಳೀಯರು ಬೆಂಕಿ ನಂದಿಸುವಲ್ಲಿ ಹರಸಾಹಸ ಪಡುತ್ತಿದ್ದು, ಬೆಂಕಿಯ ತೀವ್ರತೆ ಹೆಚ್ಚುತ್ತಿದ್ದಂತೆ ಸ್ಥಳೀಯರು ಅಗ್ನಿ ಶಾಮಕ ದಳದವರಿಗೆ ಮಾಹಿತಿ ನೀಡಿದ್ದಾರೆ.

ಘಟನೆಯಲ್ಲಿ ಗಿಡಮರಗಳಿಗೆ ಹಾನಿಯಾಗಿದೆ. ಸ್ಥಳಕ್ಕೆ ಅಗ್ನಿ ಶಾಮಕ ದಳ ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯ ಮುಂದುವರೆದಿದೆ. ದಿನದಿಂದ ದಿನಕ್ಕೆ ಬಿಸಿಲಿನ ಬೇಗೆ ಹೆಚ್ಚುತ್ತಿದ್ದು, ಶಾರ್ಟ್‌ ಸರ್ಕ್ಯೂಟ್‌‌ನಿಂದ ಈ ಅವಘಡ ಸಂಭವಿಸಿದೆಂದು ಸ್ಥಳೀಯರಿಂದ ತಿಳಿದುಬಂದಿದೆ.

ರಾಜ್ಯ