
ಪುತ್ತೂರು: ಸರಕಾರಿ ಜಮೀನಿನಿಂದ ಶ್ರೀಗಂಧ ಕಡಿದು ಸಾಗಾಟ ಮಾಡಲು ದಾಸ್ತಾನಿರಿಸಿದ ಪ್ರಕರಣವನ್ನು ಪತ್ತೆ ಹಚ್ಚಿರುವ ಅರಣ್ಯ ಸಂಚಾರಿ ದಳದವರು ಶ್ರೀಗಂಧ ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.


ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಕಣಿಯಾರು ಸಿ.ಆರ್. ಕಾಲೋನಿಯ ವೇಲು ಎಂಬವರ ಪುತ್ರ ಕಮಲ್ ಯಾನೆ ಕಮಲ್ ವಾಸನ್ (46 ವ) ಬಂಧಿತ ಆರೋಪಿ
1,43,000 ರೂಪಾಯಿ ಮೌಲ್ಯದ 22 ಕೆ.ಜಿ. ಶ್ರೀಗಂಧದ ಕೊರಡುಗಳನ್ನು ಅಕ್ರಮವಾಗಿ ಕೊಳ್ತಿಗೆ ಗ್ರಾಮದ ಕಣಿಯಾರು ಸರಕಾರಿ ಜಮೀನಿನಿಂದ ಕಡಿದು ಸಾಗಾಟಕ್ಕೆ ತನ್ನ ವಶದಲ್ಲಿಟ್ಟುಕೊಂಡಿದ್ದ. ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿ ಸಿ.ಆರ್. ಕಾಲನಿ ಬಳಿ ಬಂಧಿಸಲಾಗಿದೆ.
