
ಸಿಡಿಲು ಬಡಿದು ವ್ಯಕ್ತಿಯೋರ್ವರು ಮೃತಪಟ್ಟ ದಾರುಣ ಘಟನೆ ಸುಬ್ರಹ್ಮಣ್ಯದಿಂದ ವರದಿಯಾಗಿದೆ.ಮೇ.3 ರ ಸಂಜೆ ಘಟನೆ ನಡೆದಿದ್ದುಸುಬ್ರಹ್ಮಣ್ಯ ಗ್ರಾಮದ ಪರ್ವತಮುಖಿ ನಿವಾಸಿ ಸೋಮಸುಂದರ್ ಮೃತ ಪಟ್ಟವರು. 34 ವರ್ಷವಾಗಿತ್ತು. ಸಂಜೆ ಸುಬ್ರಹ್ಮಣ್ಯ ಪರಿಸರದಲ್ಲಿ ಮಳೆ ಆರಂಭಕ್ಕೂ ಮೊದಲು ಗಾಳಿ, ಗುಡುಗು ಆರಂಭಗೊಂಡಿದ್ದು ಈ ವೇಳೆ ಮನೆಯಂಗಲದಲ್ಲಿ ಒಣಗಿಸಲು ಹಾಕಲಾಗಿದ್ದ ಅಡಿಕೆಯನ್ನು ಸೋಮಸುಂದರ್ ಅವರು ರಾಶಿ ಮಾಡುವ ವೇಳೆ ಸಿಡಿಲು ಬಡಿದಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದರೂ ಆ ವೇಳೆಗಾಗಲೇ ಅವರು ಮೃತರಾಗಿದ್ದಾರೆ.

ಸೋಮ ಸುಂದರ್ ಅವರು ಸುಬ್ರಹ್ಮಣ್ಯ ಸಮೀಪದ ಪರ್ವತ ಮುಖಿ ಬಳಿ ದೇವಿಕಾ ಕಾರ್ ವಾಷಿಂಗ್ ಉದ್ಯಮ ನಡೆಸಿಕೊಂಡಿದ್ದು, ೧೦ ದಿನಗಳ ಹಿಂದೆಯಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು ಎನ್ನಲಾಗಿದೆ. ಮೃತರು ತಾಯಿ, ತಂಗಿ, ಪತ್ನಿಯನ್ನು ಅಗಲಿದ್ದಾರೆ.
