

ಸುಳ್ಯದ ಪರಿವಾರಕಾನದಲ್ಲಿ ಬೃಹತ್ ಮರವೊಂದು ಬೇರು ಸಮೇತ ಮಾಣಿ ಮೈಸೂರು ರಾಜ್ಯ ಹೆದ್ದಾರಿಗೆ ಉರುಳಿ ಬಿದ್ದ ಪರಿಣಾಮ ಕೆಲಕಾಲ ರಸ್ತೆ ಸಂಚಾರ ಸ್ಥಗಿತ ಗೊಂಡಿತ್ತು.


ಬೃಹತ್ ಮರವು ಅಲ್ಲೇ ಪಕ್ಕದಲ್ಲಿದ್ದ ಎಲೆಕ್ಟ್ರಿಕ್ ಕೇಬಲ್ ನ ಮೇಲೆ ಬಿದ್ದ ಪರಿಣಾಮ ರಸ್ತೆಯ ಮತ್ತೊಂದು ಭಾಗದಲ್ಲಿದ್ದ ಎರಡು ವಿದ್ಯುತ್ ಕಂಬಗಳು ತುಂಡಾಗಿ ಅದು ಕೂಡ ರಸ್ತೆಗೆ ಬಿದ್ದ ಹಿನ್ನೆಲೆಯಲ್ಲಿ ಸಂಚಾರಕ್ಕೆ ತೊಡಕು ಉಂಟಾಯಿತು.

ಕೂಡಲೇ ಘಟನಾ ಸ್ಥಳಕ್ಕೆ ಧಾವಿಸಿದ ಸುಳ್ಯ ಪೊಲೀಸರು, ಹಾಗೂ ಮೆಸ್ಕಾಂ ಸಿಬ್ಬಂದಿಗಳು, ಸ್ಥಳೀಯ ಸಾರ್ವಜನಿಕರು ಮರ ತೆರವುಗೊಳಿಸಿ, ಮುರಿದು ಬಿದ್ದಿದ್ದ ವಿದ್ಯುತ್ ಕಂಬವನ್ನು ಪಕ್ಕಕ್ಕೆ ಸರಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.ಘಟನೆಯಿಂದ ಹಲವು ಕಡೆಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.


