
25 ವರ್ಷಗಳ ಬಳಿಕ ಹಾಸನ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ತೆಕ್ಕೆಗೆ ವಾಲಿದೆ. 25 ವರ್ಷಗಳ ಹಿಂದೆ ಪುಟ್ಟಸ್ವಾಮಿ ಗೌಡರನ್ನು ಎಚ್. ಡಿ. ದೇವೇಗೌಡರು ಸೋಲಿಸಿದ್ದರು. ಇದೀಗ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಅವರನ್ನು ಪುಟ್ಟಸ್ವಾಮಿ ಗೌಡರ ಮೊಮ್ಮಗ ಶ್ರೇಯಸ್ ಪಟೇಲ್ ಅವರು ಮಣಿಸಿದ್ದಾರೆ.

ಪೆನ್ಡ್ರೈವ್ ಪ್ರಕರಣದಿಂದ ಹಾಸನ ಲೋಕಸಭಾ ಕ್ಷೇತ್ರ ಭಾರೀ ಚರ್ಚೆಯಲ್ಲಿದೆ. ಸದ್ಯ ಪ್ರಜ್ವಲ್ ರೇವಣ್ಣ ಅವರು ಎಸ್ಐಟಿ ವಶದಲ್ಲಿದ್ದು ತನಿಖೆ ಎದುರಿಸುತ್ತಿರುವ ನಡುವೆಯೇ ಸಂಸತ್ ಸದಸ್ಯ ಸ್ಥಾನವನ್ನೂ ಕಳೆದುಕೊಂಡಿದ್ದಾರೆ. ಬಿಜೆಪಿ ಬೆಂಬಲಿತ ಜೆಡಿಎಸ್ ಅಭ್ಯರ್ಥಿಯಾಗಿದ್ದ ಪ್ರಜ್ವಲ್ ರೇವಣ್ಣ ಅವರನ್ನು ಶ್ರೇಯಸ್ ಪಟೇಲ್ ಸೋಲಿಸುವ ಮೂಲಕ ಹೊಸ ಇತಿಹಾಸ ಬರೆದಿದ್ದಾರೆ
