
: ತೀವ್ರ ಕುತೂಹಲ ಮೂಡಿಸಿದ್ದ ಕರ್ನಾಟಕದ ಲೋಕಸಭಾ ಚುನಾವಣೆಯ ಫಲಿತಾಂಶದ ಕುತೂಹಲಕ್ಕೆ ಅಂತೂ ತೆರೆ ಬಿದ್ದಿದೆ. ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ 19 ಸ್ಥಾನಗಳನ್ನು ಗೆದ್ದಿದೆ. ಇದರಲ್ಲಿ ಬಿಜೆಪಿ 17 ಸ್ಥಾನಗಳನ್ನು ಗೆದ್ದರೆ, ಜೆಡಿಎಸ್ 2 ಸ್ಥಾನಗಳಲ್ಲಿ ಜಯದ ನಗು ಬೀರಿತು. ಇನ್ನು ತೀವ್ರ ಪೈಪೋಟಿ ನೀಡಿದ್ದ ಕಾಂಗ್ರೆಸ್ 9 ಸ್ಥಾನಗಳನ್ನಷ್ಟೇ ಗೆಲ್ಲಲು ಸಫಲವಾಯಿತು.

ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮತ ಎಣಿಕೆ ಮುಗಿದಿದ್ದು ಅಂತಿಮವಾಗಿ ಬಿಜೆಪಿ-ಜೆಡಿಎಸ್ ಮೈತ್ರಿ 19 ಸ್ಥಾನಗಳನ್ನು ಗೆದ್ದು ಬೀಗಿದೆ. ಅದರಲ್ಲಿ 17 ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದಿದ್ದು, ಅದರ ಮಿತ್ರಪಕ್ಷವಾದ ಜೆಡಿಎಸ್ 2 ಸ್ಥಾನಗಳಲ್ಲಿ ಜಯ ಸಾಧಿಸುವಲ್ಲಿ ಯಶಸ್ಲಿಯಾಗಿದೆ. . ಇದೇವೇಳೆ ಕಳೆದ ಬಾರಿಯ ಚುನಾವಣೆಯಲ್ಲಿ ಕೇವಲ 1 ಸ್ಥಾನವನ್ನಷ್ಟೇ ಗೆಲ್ಲಲು ಸಫಲವಾಗಿದ್ದ ಕಾಂಗ್ರೆಸ್ ಈ ಬಾರಿ 9 ಸ್ಥಾನಗಳನ್ನು ಗೆದ್ದು ಚೇತರಿಕೆ ಕಂಡಿದೆ.
ಬಾಗಲಕೋಟೆ, ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ಗ್ರಾಮೀಣ, ಬೆಂಗಳೂರು ದಕ್ಷಿಣ, ಬೆಳಗಾವಿ, ಬಿಜಾಪುರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಕ್ಷಿಣ ಕನ್ನಡ, ಧಾರವಾಡ, ಹಾವೇರಿ, ಮೈಸೂರು, ಶಿವಮೊಗ್ಗ, ತುಮಕೂರು, ಉಡುಪಿ- ಚಿಕ್ಕಮಗಳೂರು, ಉತ್ತರ ಕನ್ನಡಗಳಲ್ಲಿ ಬಿಜೆಪಿ ಗೆದ್ದಿದ್ದರೆ, ಮಂಡ್ಯ ಮತ್ತು ಕೋಲಾರ ಕ್ಷೇತ್ರಗಳಲ್ಲಿ ಜೆಡಿಎಸ್ ಗೆದ್ದು ಬೀಗಿದೆ. ಬಳ್ಳಾರಿ, ಬೀದರ್, ಚಾಮರಾಜನಗರ, ಚಿಕ್ಕೋಡಿ, ದಾವಣಗೆರೆ, ಗುಲ್ಬರ್ಗಾ, ಹಾಸನ, ಕೊಪ್ಪಳ ಮತ್ತು ರಾಯಚೂರು ಕ್ಷೇತ್ರಗಳು ಕಾಂಗ್ರೆಸ್ ಪಾಲಾಗಿವೆ.ಮಾಜಿ ಸಿಎಂಗಳಾದ ಜಗದೀಶ್ ಶೆಟ್ಟರ್. ಬಸವರಾಜ ಬೊಮ್ಮಾಯಿ, ಎಚ್ ಡಿ ಕುಮಾರಸ್ವಾಮಿ, ಮಾಜಿ ಸಚಿವರಾದ ವಿ ಸೋಮಣ್ಣ, ಡಾ ಕೆ ಸುಧಾಕರ್, ಕೇಂದ್ರ ಸಚಿವವ ಶೋಭಾ ಕರಂದ್ಲಾಜೆ, ಯದುವೀರ್ ಒಡೆಯರ್ ಗೆದ್ದ ಪ್ರಮುಖರಾಗಿದ್ದಾರೆ. ದಕ್ಷಿಣ ಕರ್ನಾಟಕದಲ್ಲಿ ಬಿಜೆಪಿ ಉತ್ತಮ ಪ್ರದರ್ಶನ ತೋರಿದ್ದರೆ, ಉತ್ತರ ಭಾಗದಲ್ಲಿ ಕಾಂಗ್ರೆಸ್ ಬಹಳ ಚೇತರಿಕೆ ಕಂಡಿದೆ.
ಕಮಲ ಪಾಳೆಯ.ಈ ಬಾರಿ ರಾಜ್ಯದಲ್ಲಿ ಜೆಡಿಎಸ್ ನೊಂದಿಗೆ ಮೈತ್ರಿ ಮಾಡಿಕೊಂಡು ಭರ್ಜರಿ ಚುನಾವಣಾ ಪ್ರಚಾರ ನಡೆಸಿತ್ತು. ಪ್ರಧಾನ ಮೋದಿ, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ, ಮಾಜಿ ಸಿಎಂಗಳಾದ ಬಿಎಸ್ ಯಡಿಯೂರಪ್ಪ, ಎಚ್ ಡಿ ಕುಮಾರಸ್ವಾಮಿ ಬಿಡುವಲ್ಲದೆ ಮತಬೇಟೆ ನಡೆಸಿದರು.
ಏಪ್ರಿಲ್ 24ರಂದು ಮೊದಲ ಹಂತದ ಚುನಾವಣೆ 14 ಕ್ಷೇತ್ರಗಳಿಗೆ ನಡೆದರೆ ಮೇ 7ರಂದು ಎರಡನೇ ಹಂತದ ಚುನಾವಣೆ ಉಳಿದ 14 ಕ್ಷೇತ್ರಗಳಿಗೆ ನಡೆಯಿತು. ಮತಗಟ್ಟೆ ಸಮೀಕ್ಷೆಗಳು ಬಿಜೆಪಿಗೆ 23ರಿಂದ 25 ಸ್ಥಾನ, ಕಾಂಗ್ರಸ್ ಗೆ 3ರಿಂದ 5 ಸ್ಥಾನಗಳ ಭವಿಷ್ಯ ನುಡಿದಿವೆ. ಇನ್ನು ಜೆಡಿಎಸ್ 2 ಸ್ಥಾನ ಗೆಲ್ಲುವ ಸಾಧ್ಯತೆ ಇತ್ತು ಎಂದು ತಿಳಿಸಿತ್ತುಕರ್ನಾಟಕದ ಮತದಾರನ ನಾಡಿಮಿಡಿತ ಅಷ್ಟು ಸುಲಭವಾಗಿ ಅರ್ಥೈಸುಕೊಳ್ಳುವಂಥದ್ದಲ್ಲ. ಇದಕ್ಕೆ ಕಾರಣ ಕಳೆದೆರಡು ದಶಕಗಳ ಚುನಾವಣಾ ಫಲಿತಾಂಶಗಳನ್ನು ಪರಿಶೀಲಿಸಿದರೆ ನಮಗೆ ತಿಳಿಯುತ್ತದೆ. ಹೆಚ್ಚೇಕೆ ಒಂದೇ ವರ್ಷದ ಅಂತರದಲ್ಲಿ ನಡೆದ ವಿಧಾನಸಭೆ ಮತ್ತು ಲೋಕಸಭೆಗಳಲ್ಲಿ ಭಿನ್ನಭಿನ್ನವಾದ ಫಲಿತಾಂಶಗಳು ಬಂದಿವೆ. ಅಂದರೆ ಈ ರಾಜ್ಯದ ಮತದಾರ ರಾಷ್ಟ್ರ ರಾಜಕಾರಣ ಮತ್ತು ರಾಜ್ಯ ರಾಜಕಾರಣವನ್ನು ಒಂದೇ ತಕ್ಕಡಿಯಲ್ಲಿಟ್ಟು ತೂಗುವುದಿಲ್ಲ ಎಂಬುದು ಸ್ಪಷ್ಟ.2004ರಿಂದ ಫಲಿತಾಂಶಗಳನ್ನು ಗಮನಿಸಿದಾಗ ಕರ್ನಾಟಕದಲ್ಲಿ ಬಿಜೆಪಿ ಹೆಚ್ಚು ಸ್ಥಾನಗಳನ್ನು ಗೆದ್ದಿದೆ. ಯುಪಿಎ ಸರ್ಕಾರ ಇದ್ದಾಗಲೂ ರಾಜ್ಯದಲ್ಲಿ ಕಾಂಗ್ರೆಸ್ ದೊಡ್ಡ ಮಟ್ಟಿನ ಯಶಸ್ಸನ್ನು ಕಂಡಿರಲಿಲ್ಲ. ಕಳೆದ ಬಾರಿಯಂತೂ ಮೋದಿ ಅಲೆಯಲ್ಲಿ ಕೊಚ್ಚಿ ಹೋದ ಕಾಂಗ್ರೆಸ್ ಕೇವಲ ಒಂದು ಸ್ಥಾನವನ್ನಷ್ಟೇ ಗೆದ್ದುಕೊಳ್ಳಲು ಸಫಲವಾಗಿತ್ತು.
