ಗಾಂಜಾ ಮಾರಾಟದಲ್ಲಿ ತೊಡಗಿದ್ದ ವಿದ್ಯಾರ್ಥಿ ಪೊಲೀಸ್ ಬಲೆಗೆ .

ಗಾಂಜಾ ಮಾರಾಟದಲ್ಲಿ ತೊಡಗಿದ್ದ ವಿದ್ಯಾರ್ಥಿ ಪೊಲೀಸ್ ಬಲೆಗೆ .

ಉಡುಪಿ: ಗಾಂಜಾ ಮಾರಾಟ ಮಾಡುತ್ತಿದ್ದ ಕೇರಳದ ವಿದ್ಯಾರ್ಥಿಯೋರ್ವನನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.

ವಿದ್ಯಾರ್ಥಿ ಸಿದ್ದಾರ್ಥ್ (22) ಬಂಧಿತ ಆರೋಪಿ

ಉಡುಪಿ ತಾಲೂಕಿನ ಹೆರ್ಗ ಗ್ರಾಮದ ಅಪಾರ್ಟ್‌ಮೆಂಟ್‌ನ ಮೇಲೆ ಮಾದಕ ವಸ್ತು ಚಟುವಟಿಕೆ ಬಗ್ಗೆ ಖಚಿತ ಮಾಹಿತಿ ಮೇರೆಗೆ ಇನ್ಸ್‌ಪೆಕ್ಟರ್ ದೇವರಾಜ್ ಟಿ ವಿ ಮತ್ತು ಸಬ್ ಇನ್ಸ್ ಪೆಕ್ಟರ್ ರಾಘವೇಂದ್ರ ಸಿ., ಎಎಸ್‌ಐಗಳಾದ ವಿವೇಕಾನಂದ ಮತ್ತು ಶೈಲೇಶ್ ಕುಮಾ‌ರ್ ನೇತೃತ್ವದಲ್ಲಿ ದಾಳಿ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ.

ಆರೋಪಿಯಿಂದ ಸುಮಾರು 20 ಸಾವಿರ ಮೌಲ್ಯದ 388 ಗ್ರಾಂ ತೂಕದ ಡ್ರಗ್ಸ್ ಹಾಗೂ ಮೊಬೈಲ್ ಫೋನ್ ಹ್ಯಾಂಡ್ ಸೆಟ್ 45 ಸಾವಿರ ವಶಪಡಿಸಿಕೊಂಡಿದ್ದಾರೆ. ಬಂಧಿತ ವ್ಯಕ್ತಿ ಮಣಿಪಾಲದ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಾಡುವ ಉದ್ದೇಶ ಹೊಂದಿದ್ದ ಎಂದು ತಿಳಿದುಬಂದಿದೆ. ಸದ್ಯ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ರಾಜ್ಯ