ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿಯಲ್ಲಿ ಸರಣಿ ಅಪಘಾತ :  ಹಲವರಿಗೆ ಗಾಯ .

ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿಯಲ್ಲಿ ಸರಣಿ ಅಪಘಾತ :  ಹಲವರಿಗೆ ಗಾಯ .

ಉಪ್ಪಿನಂಗಡಿ : ಸರಣಿ ಅಪಘಾತ ನಡೆದ ಘಟನೆ ಇಂದು ಮುಂಜಾನೆ ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿಯಲ್ಲಿ ನಡೆದಿದೆ.

ಟ್ಯಾಂಕರ್ ಲಾರಿಯೊಂದು ಸ್ವಿಫ್ಟ್ ಕಾರಿಗೆ ಡಿಕ್ಕಿಯಾಗಿ ದೂಡಿಕೊಂಡು ಬಂದ ಹಿನ್ನೆಲೆ ಸ್ವಿಫ್ಟ್ ಕಾರು ಹಿಂಬದಿಯಲ್ಲಿ ಬರುತ್ತಿದ್ದ ಆಲ್ಟೋ ಕಾರಿಗೆ ಡಿಕ್ಕಿಯಾಗಿ ಸರಣಿ ಅಪಘಾತ ನಡೆದಿದೆ.

ಘಟನೆಯಲ್ಲಿ ಆಲ್ಟೋ ಕಾರಿನಲ್ಲಿದ್ದ ಬಜತ್ತೂರಿನ ಮೂವರು ಹಾಗೂ ಸ್ವಿಫ್ಟ್ ಕಾರಿನ ಚಾಲಕ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ.

ಬೆಂಗಳೂರಿನಿಂದ ಮಂಗಳೂರು ಕಡೆಗೆ ದಿನೇಶ್ ಎಂಬವರು ಚಲಾಯಿಸಿಕೊಂಡು ಹೋಗುತ್ತಿದ್ದ ಟ್ಯಾಂಕರ್ ಲಾರಿ, ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಅರಣ್ಯ ಇಲಾಖೆ ನರ್ಸರಿ ಬಳಿ ಕಾಂಕ್ರಿಟ್ ರಸ್ತೆಯಲ್ಲಿ ಎದುರಿನಿಂದ ಮಹೇಶ್ ಎಂಬವರು ಚಲಾಯಿಸಿಕೊಂಡು ಬರುತ್ತಿದ್ದ ಸ್ವಿಫ್ಟ್ ಕಾರಿಗೆ ಡಿಕ್ಕಿಯಾಗಿ ದೂಡಿಕೊಂಡು ಬಂದು ಸ್ವಿಫ್ಟ್ ಕಾರಿನ ಹಿಂಬದಿಯಿಂದ ಬಜತ್ತೂರಿನ ರೆಂಜಾಲ ನಿವಾಸಿ ಮನೋಹರ ಎಂಬವರು ಚಲಾಯಿಸಿಕೊಂಡು ಬರುತ್ತಿದ್ದ ಆಲ್ಟೋ ಕಾರಿಗೆ ಡಿಕ್ಕಿಯಾಗಿದೆ.

ಘಟನೆಯಲ್ಲಿ ಆಲ್ಟೋ ಕಾರಿನಲ್ಲಿದ್ದ ಮನೋಹರ ಅವರ ಬಾವ ನಾರಾಯಣ ಕೆ., ತಾಯಿ ದಮಯಂತಿ, ಸಂಬಂಧಿಕರಾದ ಕೂನಮ್ಮ ಹಾಗೂ ಸ್ವಿಫ್ಟ್ ಕಾರು ಚಾಲಕ ಮಹೇಶ್ ಅವರು ಗಾಯಗೊಂಡಿದ್ದಾರೆ.

ಕಾರು ಚಾಲಕ ಮನೋಹರ ಅವರು ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯ