ಮಂಗಳೂರು ರಿಕ್ಷಾ ತೊಳೆಯುತ್ತಿದ್ದ ವೇಳೆ ವಿದ್ಯುತ್ ತಂತಿ‌ ಸ್ಪರ್ಶಿಸಿ ಆಟೋ   ಚಾಲಕರು ಸಾವು 

ಮಂಗಳೂರು ರಿಕ್ಷಾ ತೊಳೆಯುತ್ತಿದ್ದ ವೇಳೆ ವಿದ್ಯುತ್ ತಂತಿ‌ ಸ್ಪರ್ಶಿಸಿ ಆಟೋ   ಚಾಲಕರು ಸಾವು 

ಮಂಗಳೂರು ಅಟೋ ರಿಕ್ಷಾ ತೊಳೆಯುತ್ತಿದ್ದಾತನ  ವಿದ್ಯುತ್ ತಂತಿ ತುಂಡಾಗಿ ಬಿದ್ದು, ಶಾಕ್ ಒಳಪಟ್ಟು ವಿಲ ವಿಲ ಒದ್ದಾಡುತ್ತಿದ್ದ ರಿಕ್ಷಾ ಚಾಲಕ ಸಾವನ್ನಪ್ಪಿದ್ದಲ್ಲದೆ ಆತನ ರಕ್ಷಣೆಗೆ ಧಾವಿಸಿದ ಮತ್ತೊಬ್ಬ ರಿಕ್ಷಾ ಚಾಲಕನೂ ಮೃತಪಟ್ಟ ಘಟನೆ ಗುರುವಾರ ಬೆಳಗ್ಗೆ ಮಂಗಳೂರು ನಗರದ ರೊಸಾರಿಯೊ ಶಾಲೆಯ ಬಳಿ ನಡೆದಿದೆ.

ಮೃತ ರಿಕ್ಷಾ ಚಾಲಕರನ್ನುಉಪ್ಪಿನಂಗಡಿ ಮೂಲದ  ರಾಜು ಮತ್ತು ದೇವರಾಜು ಎಂದು ಗುರುತಿಸಲಾಗಿದೆ. ಇನ್ನೊಬ್ಬರು ಸಕಲೇಶಪುರದವರು. ಇಬ್ಬರೂ ಪಾಂಡೇಶ್ವರದ ರೊಸಾರಿಯೋ ಚರ್ಚ್ ಹಿಂಬದಿ ಬಾಡಿಗೆ ರೂಂನಲ್ಲಿ ವಾಸವಾಗಿದ್ದರು.

ಇಂದು ಬೆಳಗ್ಗೆ 4.30 ರ ಸುಮಾರಿಗೆ ಒಬ್ಬರು ರಿಕ್ಷಾ ಸ್ವಚ್ಚ ಗೊಳಿಸಲು ಹೊರಬಂದಿದ್ದು, ರಿಕ್ಷಾ ತೊಳೆಯುವ ವೇಳೆ ಮಳೆಗೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ವಿದ್ಯುತ್ ಆಘಾತಕ್ಕೆ ಒಳಗಾಗಿದ್ದರು. ಇದನ್ನು ಕಂಡ ಇನ್ನೊಬ್ಬ ಚಾಲಕ ಗೋಣಿ ಚೀಲ ಹಿಡಿದು ರಕ್ಷಣೆಗೆ ಮುಂದಾಗಿದ್ದು, ಅವರೂ ವಿದ್ಯುತ್ ಅಘಾತಕ್ಕೆ ಒಳಗಾಗಿರಬಹುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಮೃತದೇಹಗಳನ್ನು ವೆನ್ಲಾಕ್‌ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ ಎಂದು ತಿಳಿದು ಬಂದಿದೆ.

ರಾಜ್ಯ