ಬೆಳ್ತಂಗಡಿ, ಬಂಟ್ವಾಳದಲ್ಲಿ  ಭಾರೀ ಮಳೆ: ತಾಲೂಕಿನ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ

ಬೆಳ್ತಂಗಡಿ, ಬಂಟ್ವಾಳದಲ್ಲಿ  ಭಾರೀ ಮಳೆ: ತಾಲೂಕಿನ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ

ಬೆಳ್ತಂಗಡಿ, ಬಂಟ್ವಾಳ ಜುಲೈ 04: ಭಾರಿ ಮಳೆಯಾಗುತ್ತಿರುವ ಕಾರಣ ದಕ್ಷಿಣ ಕನ್ನಡದ  ಬೆಳ್ತಂಗಡಿ, ಬಂಟ್ವಾಳ ತಾಲೂಕಿನ ಎಲ್ಲ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಜುಲೈ 4ರಂದು ರಜೆ ಘೋಷಿಸಲಾಗಿದೆ.

ಜುಲೈ 3ರಂದೂ ಭಾರಿ ಮಳೆಯಾಗಿದ್ದು, ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿತ್ತು. ಜುಲೈ 4ರಂದೂ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಎಲ್ಲಾ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ  ಬೆಳ್ತಂಗಡಿ ತಹಶೀಲ್ದಾರ್ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿ ರಜೆ ನೀಡಿದ್ದಾರೆ.

ಬಂಟ್ವಾಳ ತಾಲೂಕಿನಲ್ಲೂ ಭಾರಿ ಮಳೆಯಾಗುತ್ತಿರುವ ಕಾರಣ ಮುಂಜಾಗೃತಾ ಕ್ರಮವಾಗಿ ತಾಲೂಕಿನ ಎಲ್ಲಾ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ  ತಹಶೀಲ್ದಾರ್ ರಜೆ ಘೋಷಣೆ ಮಾಡಿದ್ದಾರೆ

ರಾಜ್ಯ