ಚಹಾ ಕುಡಿದು ಲಾರಿಯತ್ತ ಬರುತ್ತಿದ್ದ ಲಾರಿ ಚಾಲಕರಿಬ್ಬರಿಗೆ ಕಾರು ಡಿಕ್ಕಿ : ಗಂಭೀರ ಗಾಯ 

ಚಹಾ ಕುಡಿದು ಲಾರಿಯತ್ತ ಬರುತ್ತಿದ್ದ ಲಾರಿ ಚಾಲಕರಿಬ್ಬರಿಗೆ ಕಾರು ಡಿಕ್ಕಿ : ಗಂಭೀರ ಗಾಯ 

  

ನೆಲ್ಯಾಡಿ: ಚಹಾ ಕುಡಿದು ಲಾರಿಯತ್ತ ಬರುತ್ತಿದ್ದ ಇಬ್ಬರು ಲಾರಿ ಚಾಲಕರಿಗೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಚಾಲಕರು ಗಂಭೀರ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಬೆಂಗಳೂರು- ಮಂಗಳೂರು ನಡುವೆ ನೆಲ್ಯಾಡಿ ಸಮೀಪದ ಕೋಲ್ಪೆಯಲ್ಲಿ ನಡೆದಿದೆ.

ಸಕಲೇಶಪುರ ಮೂಲದ ಲಾರಿ ಚಾಲಕರಾದ ವಿನಯ ಕುಮಾರ್ ಹಾಗೂ ಮಂಜ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕೋಲ್ಪೆಯಲ್ಲಿ ಲಾರಿ ನಿಲ್ಲಿಸಿ ಪಕ್ಕದ ಕ್ಯಾಂಟಿನ್ ವೊಂದರಲ್ಲಿ ಚಹಾ ಕುಡಿದು ಲಾರಿಯ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಕಾರೊಂದು ಡಿಕ್ಕಿಯಾಗಿದೆ. ಕಾರು ರಸ್ತೆ ಬದಿ ನಿಲ್ಲಿಸಿದ್ದ ಈಚರ್ ಲಾರಿಗೆ ಹಿಂಬದಿಯಿಂದ ಡಿಕ್ಕಿಯಾಗಿ ನಿಂತಿದೆ. ಕಾರಿನಲ್ಲಿ ಚಾಲಕ ಮಾತ್ರ ಇದ್ದು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ನೆಲ್ಯಾಡಿ ಹೊರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಜ್ಯ