
ಮಂಗಳೂರು: ಭಾರೀ ಮಳೆಯ ಹಿನ್ನಲೆಯಲ್ಲಿ ನಾಳೆ (ಜು.9) ದ.ಕ.. ಜಿಲ್ಲೆಯ ಶಾಲಾ-ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ.

ಈ ಕುರಿತು ದ ಕ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದು, ದ.ಕ.ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ದ.ಕ.ಜಿಲ್ಲಾದ್ಯಂತ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

