ಸುದ್ದಿಗೋಷ್ಠಿ ವೇಳೆ ಏಕಾಏಕಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಮೂಗಿನಿಂದ ಹರಿದ ರಕ್ತ

ಸುದ್ದಿಗೋಷ್ಠಿ ವೇಳೆ ಏಕಾಏಕಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಮೂಗಿನಿಂದ ಹರಿದ ರಕ್ತ

ಬೆಂಗಳೂರು ಜುಲೈ 28: ಪತ್ರಕರ್ತರೊಂದಿಗೆ ಮಾತನಾಡುತ್ತಿರುವ ವೇಳೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರ ಮೂಗಿನಿಂದ ರಕ್ತಸ್ರಾವವಾದ ಘಟನೆ ನಡೆದಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಮುಡಾ ಅಕ್ರಮವನ್ನು ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಮೈಸೂರಿನಿಂದ ಪಾದಯಾತ್ರೆ ಹಮ್ಮಿಕೊಳ್ಳಲು ಬೆಂಗಳೂರಿನ ಖಾಸಗಿ ಹೋಟೆಲ್‌ ಒಂದರಲ್ಲಿ ಬಿಜೆಪಿ-ಜೆಡಿಎಸ್‌ ನಾಯಕರು ಜಂಟಿಯಾಗಿ ಸಭೆ ನಡೆಸಿದ್ದರು. ಸಭೆಯಲ್ಲಿ ಹೆಚ್‌.ಡಿ ಕುಮಾರಸ್ವಾಮಿ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ, ವಿಪಕ್ಷ ನಾಯಕ ಆರ್‌. ಅಶೋಕ್‌ ಸೇರಿದಂತೆ ಅನೇಕ ನಾಯಕರು ಪಾಲ್ಗೊಂಡಿದ್ದರು. ಸಭೆಯನ್ನುದ್ದೇಶಿಸಿ ಹೆಚ್‌ಡಿಕೆ ಮಾತನಾಡುತ್ತಿದ್ದಂತೆ ದಿಢೀರ್‌ ಅಂತ ಮೂಗಿನಿಂದ ರಕ್ತಸ್ರಾವ ಉಂಟಾಯಿತು.

ರಕ್ತಸ್ರಾವದ ಪ್ರಮಾಣ ಇದ್ದಕ್ಕಿದ್ದಂತೆ ಹೆಚ್ಚಾಗತೊಡಗಿತು. ಇದರಿಂದ ಆತಂಕಗೊಂಡ ಕಾರ್ಯಕರ್ತರು ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದರು. ಮೂಗಿಗೆ ಕರ್ಚೀಫ್‌ ಹಿಡಿದುಕೊಂಡೇ ಕಾರಿನಲ್ಲಿ ಹೆಚ್‌ಡಿಕೆ ಜಯನಗರ ಅಪೋಲೋ ಆಸ್ಪತ್ರೆಗೆ ಹೊರಟರು. ಕಾರು ತೆರಳುವಷ್ಟರಲ್ಲಿ ಬಟ್ಟೆಯೆಲ್ಲಾ ರಕ್ತದ ಕಲೆಯಾಗಿತ್ತು

ರಾಜ್ಯ