ಮೈಸೂರು : ಚಾಮುಂಡೇಶ್ವರಿ ಗರ್ಭಗುಡಿಯಲ್ಲಿ ಮಹಿಳಾ ಅಧಿಕಾರಿಯ ಹಣೆಗೆ ಕುಂಕುಮ ಇಟ್ಟ ಸಂಸದ ಸುನೀಲ್ ಬೋಸ್, ಫೋಟೋ ವೈರಲ್‌.

ಮೈಸೂರು : ಚಾಮುಂಡೇಶ್ವರಿ ಗರ್ಭಗುಡಿಯಲ್ಲಿ ಮಹಿಳಾ ಅಧಿಕಾರಿಯ ಹಣೆಗೆ ಕುಂಕುಮ ಇಟ್ಟ ಸಂಸದ ಸುನೀಲ್ ಬೋಸ್, ಫೋಟೋ ವೈರಲ್‌.

ಮೈಸೂರು : ತನಗೆ ಮದುವೆಯೇ ಆಗಿಲ್ಲ ಎಂದು ಕಳೆದ ಲೋಕಸಭಾ ಚುನಾವಣೆಯ ನಾಮಪತ್ರದ ಅಫಿಡೆವಿಟ್ ಸಲ್ಲಿಸಿದ್ದರು ಆದ್ರೆ ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೇಶಕಿ ಸವಿತಾ ಅವರ ಹಣೆಗೆ ಚಾಮರಾಜನಗರ ಸಂಸದ ಸುನೀಲ್‌ ಬೋಸ್ ಅವರು ಕುಂಕುಮ ಇಟ್ಟು ಬಾರಿ ಚರ್ಚೆಗೆ ಗ್ರಾಸವಾಗಿದ್ದಾರೆ.

ಚಾಮರಾಜನಗರ ಕಾಂಗ್ರೆಸ್ ಸಂಸದ ಸುನೀಲ್ ಬೋಸ್ ಅವರು ದೇವಾಲಯದ ಗರ್ಭಗುಡಿಯಲ್ಲಿ ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕಿ ಹಣೆಗೆ ಕುಂಕುಮ ಇಟ್ಟಿರುವ ಘಟನೆ ನಡೆದಿದೆ. ಮೊನ್ನೇ ಶ್ರಾವಣ ಮಾಸದ ಶುಕ್ರವಾರದಂದು ಮೈಸೂರಿನ ಚಾಮುಂಡೇಶ್ವರಿ ಗರ್ಭಗುಡಿಯಲ್ಲೇ ಎಲ್ಲರ ಸಮ್ಮುಖದಲ್ಲೇ ಸಂಸದರು, ಮಹಿಳಾಧಿಕಾರಿ ಹಣೆಗೆ ಕುಂಕುಮ ಇಟ್ಟಿದ್ದು, ಇದೀಗ ಇವರಿಬ್ಬರ ಫೋಟೋ ಭಾರೀ ವೈರಲ್ ಆಗಿದೆ.ಈ ವೇಳೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪೂಜೆ ನೆರವೇರಿಸುವಾಗ ಬೆಂಬಲಿಗರ ಸಮ್ಮುಖದಲ್ಲೇ ಸವಿತಾ ಅವರ ಹಣೆಗೆ ಸಚಿವ ಹೆಚ್​.ಸಿ ಮಹದೇವಪ್ಪ ಅವರ ಮಗ ಸುನೀಲ್ ಬೋಸ್​ ಕುಂಕುಮ ಇಟ್ಟಿದ್ದಾರೆ.

ಚಾಮರಾಜನಗರ ಸಂಸದ ಸುನೀಲ್‌ ಬೋಸ್ ಹಾಗೂ ಸವಿತಾ ಅವರ ನಡೆ ಸದ್ಯ ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾದೆ. ಈ ಸಲದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ತಮಗೆ ಮದುವೆಯಾಗಿಲ್ಲ ಎಂದು ಸುನೀಲ್‌ ಬೋಸ್ ಅಫಿಡೆವಿಟ್ ಸಲ್ಲಿಸಿದ್ದರು.ಸುನೀಲ್‌ ಬೋಸ್ ಹಾಗೂ ಸವಿತಾ ಜತೆಯಲ್ಲಿ ಇರುವ ಫೋಟೋಗಳನ್ನು ನೀಡಿ ದೂರು ನೀಡಿದ್ದರು. ಸುನೀಲ್‌ ಬೋಸ್‌ಗೆ ಮದುವೆಯಾಗಿದೆ, ಆದರೆ ಅಫಿಡವಿಟ್‌ನಲ್ಲಿ ಸುಳ್ಳು ಹೇಳಿದ್ದಾರೆ ಎಂದು ದೂರಿದ್ದರು. ಇದೀಗ ದೇವರ ಮುಂದೆಯೇ ಅದೇ ಮಹಿಳಾ ಅಧಿಕಾರಿಯ ಹಣೆಗೆ ಕುಂಕುಮ ಇಟ್ಟಿರುವುದು ಸಂಚಲನ ಮೂಡಿಸಿದೆ.

ಚಾಮುಂಡೇಶ್ವರಿ ಗರ್ಭಗುಡಿಯಲ್ಲಿ ನಡೆದದ್ದು ಸುಳ್ಳು ಅಲ್ಲ ತಾನೆ?ʼ ಎಂದು ಬಿಜೆಪಿ ಸದಸ್ಯರು ಪ್ರಶ್ನಿಸಿದ್ದಾರೆ. ʼಮದುವೆ ಆಗಿದ್ದರೆ, ಆಗಿದೆ ಎಂದು ಹೇಳಲಿ. ಇದರಲ್ಲಿ ಅಡಗಿಸಿ ಇಡುವ ಮುಜುಗರದ ಸಂಗತಿ ಏನಿದೆ?ʼ ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ. ಸಾರ್ವಜನಿಕರ ಮುಂದೆಯೇ ಓರ್ವ ಮಹಿಳಾ ಸರ್ಕಾರಿ ಅಧಿಕಾರಿಗೆ ಕುಂಕುಮ ಇಟ್ಟಿರುವುದು ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧದ ಚರ್ಚೆಗೆ ಗ್ರಾಸವಾಗಿದೆ

ರಾಜ್ಯ