ಕೊಡಗು ಮುಖ್ಯ ಮಂತ್ರಿ ಸಿದ್ದರಾಮಯ್ಯ ಭೇಟಿ: ತುರ್ತು ಕಾಮಗಾರಿ ನಡೆಸುವಂತೆ ಸೂಚನೆ.

ಕೊಡಗು ಮುಖ್ಯ ಮಂತ್ರಿ ಸಿದ್ದರಾಮಯ್ಯ ಭೇಟಿ: ತುರ್ತು ಕಾಮಗಾರಿ ನಡೆಸುವಂತೆ ಸೂಚನೆ.

ಮಡಿಕೇರಿ ಆ.2: ಪೊನ್ನಂಪೇಟೆ ತಾಲ್ಲೂಕಿನ ಶ್ರೀಮಂಗಲ ಕುಟ್ಟದ ಗುಡ್ಡ ಕುಸಿತ ಪ್ರದೇಶಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲಿಸಿ ಅಧಿಕಾರಿಗಳು ಮತ್ತು ಸ್ಥಳೀಯರ ಜೊತೆ ಚರ್ಚಿಸಿದರು.ಗುಡ್ಡ ಕುಸಿತದ ಪರಿಣಾಮ ಸುಮಾರು 20 ಕ್ಕೂ ಹೆಚ್ಚು ಕುಟುಂಬಗಳು ಸಂಪರ್ಕ ಕಳೆದುಕೊಂಡಿದ್ದು ಇಲ್ಲಿ ತೂಗು ಸೇತುವೆ ನಿರ್ಮಿಸುವ ಜೊತೆಗೆ ತುರ್ತಾಗಿ ರಸ್ತೆ ನಿರ್ಮಾಣದ ಜೊತೆಗೆ ಇತರೆ ದುರಸ್ತಿ ಕಾರ್ಯಗಳನ್ನು ಮುಗಿಸುವಂತೆ ಸೂಚಿಸಿದರು.

ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಗುಡ್ಡ ಕುಸಿತದ ಪರಿಣಾಮಗಳನ್ನು ಮತ್ತು ತೆಗೆದುಕೊಳ್ಳಲಾಗಿರುವ ಸುರಕ್ಷತಾ ಕ್ರಮಗಳು ಹಾಗೂ ಕಾಮಗಾರಿಗಳ ಬಗ್ಗೆ ಮುಖ್ಯಮಂತ್ರಿಗಳಿಗೆ ವಿವರಿಸಿದರು.ಕೊಡಗು ಜಿಲ್ಲಾ ಉಸ್ತುವಾರಿ ಸಚಿವ. ಎನ್.ಎಸ್.ಭೋಸರಾಜು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ಶಾಸಕ ಎ.ಎಸ್.ಪೊನ್ನಣ್ಣ, ಶಾಸಕ ಡಾ.ಮಂತರ್ ಗೌಡ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್,ಕಾರ್ಯದರ್ಶಿಗಳಾದ ರಶ್ಮಿ ಮಹೇಶ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಧರ್ಮಜ ಉತ್ತಪ್ಪ ಇತರರು ಇದ್ದರು.

 

ರಾಜ್ಯ