
ವಯನಾಡ್: ಪ್ರಧಾನಿ ನರೇಂದ್ರ ಮೋದಿ ಕೇರಳದ ವಯನಾಡ್ ಭೂಕುಸಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ಶನಿವಾರ ನಡೆಸಿದರು.

ಕಣ್ಣೂರು ವಿಮಾನ ನಿಲ್ದಾಣದಿಂದ ಬೆಳಗ್ಗೆ ಸುಮಾರು 11.15 ಗಂಟೆಗೆ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ನಲ್ಲಿ ವಯನಾಡ್ ಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ, ಭೂಕುಸಿತದಿಂದ ಭಾರಿ ಹಾನಿಗೀಡಾಗಿರುವ ಚೂರಲ್ ಮಲ, ಮುಂಡಕ್ಕೈ ಹಾಗೂ ಪುಂಚಿರಿಮಟ್ಟಂ ಗುಡ್ಡಗಾಡಿನ ವೈಮಾನಿಕ ಸಮೀಕ್ಷೆ ನಡೆಸಿದರು.
ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಕೇರಳ ರಾಜ್ಯಪಾಲ ಆರಿಫ್ ಮುಹಮ್ಮದ್ ಖಾನ್, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹಾಗೂ ಕೇಂದ್ರ ಪ್ರವಾಸೋದ್ಯಮ, ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಖಾತೆಯ ರಾಜ್ಯ ಸಚಿವ ಸುರೇಶ್ ಗೋಪಿ ಕೂಡಾ ವೈಮಾನಿಕ ಸಮೀಕ್ಷೆಯಲ್ಲಿ ಪಾಲ್ಗೊಂಡರು

