
ಬೆಳ್ತಂಗಡಿ: “ಭ್ರಷ್ಟಾಚಾರ ಮಾಡಿಲ್ಲ, ಒಂದು ರೂಪಾಯಿ ಮುಟ್ಟಿಲ್ಲ, ಒಂದು ವೇಳೆ ತಪ್ಪು ಮಾಡಿದ್ದರೆ ತಕ್ಕ ಶಿಕ್ಷೆಯನ್ನು ಮಾರಿಗುಡಿಯ ಮಹಾದೇವಿ ನೀಡಲಿ” ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಬೆಳ್ತಂಗಡಿಯ ಮಾರಿಗುಡಿಯಲ್ಲಿ ಪ್ರಮಾಣ ಮಾಡಿದ್ದಾರೆ.


ಹರೀಶ್ ಪೂಂಜಾ ವಿರುದ್ಧ ಐ.ಬಿ ಕಾಮಗಾರಿಯಲ್ಲಿನ ಭ್ರಷ್ಠಾಚಾರ, ರಾಷ್ಟ್ರೀಯ ಹೆದ್ದಾರಿಯ ಗುತ್ತಿಗೆದಾರರಿಂದ ಕಿಕ್ ಬ್ಯಾಕ್ ಸೇರಿದಂತೆ ಹಲವು ಆರೋಪಗಳನ್ನು ಕಾಂಗ್ರೆಸ್ ಮುಖಂಡ ರಕ್ಷಿತ್ ಶಿವರಾಂ ಶಾಸಕರ ಮಾಡಿದ್ದರು. ಇದಕ್ಕೆ ಮಂಗಳವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ್ದ ಶಾಸಕ ಪೂಂಜಾ, “ಈ ಆರೋಪಗಳೆಲ್ಲ ಸುಳ್ಳು, ತಾನು ಯಾವುದೇ ಭ್ರಷ್ಟಾಚಾರ ಮಾಡಿಲ್ಲ. ಈ ಬಗ್ಗೆ ಮಾರಿಗುಡಿಯಲ್ಲಿ ಪ್ರಮಾಣ ಮಾಡುತ್ತೇನೆ. ಯಾರು ತಪ್ಪು ಮಾಡಿದ್ದಾರೋ ಅವರಿಗೆ ಶಿಕ್ಷೆಯಾಗಲಿ” ಎಂದಿದ್ದರು.

ಇದೀಗ ಅವರು ಹೇಳಿದಂತೆ ಮಾರಿ ಗುಡಿಯಲ್ಲಿ ಪ್ರಮಾಣ ಮಾಡಿದ್ದು, ನನ್ನ ಮೇಲೆ ಆರೋಪ ಮಾಡಿದ್ದ ರಕ್ಷಿತ್ ಶಿವರಾಮ್ ಮುಂದೆ ಬ್ರಷ್ಟಾಚಾರದ ಬಗ್ಗೆ ಮಾತಾಡುವ ಮೊದಲು ತಮ್ಮ ಕುಟುಂಬ ಬ್ರಷ್ಟಾಚಾರ ಮಾಡಿಲ್ಲ ಎಂದು ಪ್ರಮಾಣ ಮಾಡಲಿ ಎಂದು ಸವಾಲೆಸೆದಿದ್ದಾರೆ.
