
ಕೊಡಗು: ಸಣ್ಣಪುಲಿಕೋಟು ಗ್ರಾಮದ ಮನೆಯೊಂದರಲ್ಲಿ

ನಾಡ ಬಂದೂಕುಗಳನ್ನು ತಯಾರಿಸಿ ಮಾರಾಟ ಮಾಡುತ್ತಿರುವ ಪ್ರಕರಣ ಪತ್ತೆ ಹಚ್ಚಿರುವ ಪೋಲಿಸರು ನಾಲ್ವರನ್ನು ಬಂದಿಸಿದ್ದಾರೆ.

ಭಾಗಮಂಡಲ ಪೊಲೀಸ್ ಠಾಣಾ ವ್ಯಾಪ್ತಿಯ ಸಣ್ಣಪುಲಿಕೋಟು ಗ್ರಾಮದ ಮನೆಯೊಂದರಲ್ಲಿ
ಅಕ್ರಮವಾಗಿ ನಾಡ ಬಂದೂಕುಗಳನ್ನು ತಯಾರಿಸಿ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ
ಹಿನ್ನೆಲೆಯಲ್ಲಿ ಸಣ್ಣಪುಲಿಕೋಟು ಗ್ರಾಮದ ಬಾಡಿಗೆ ಮನೆಯಲ್ಲಿ ವಾಸವಿದ್ದ ಕೇರಳ ರಾಜ್ಯ ಇಡುಕ್ಕಿ ಜಿಲ್ಲೆ ಮೂಲದ ಸುರೇಶ್ ಎಂಬಾತನ ಮನೆಯ ಮೇಲೆ ಧಾಳಿ ನಡೆಸಿ ಅಕ್ರಮವಾಗಿ ನಾಡ ಬಂದೂಕು ತಯಾರಿಸಲು ಬಳಸುತ್ತಿದ್ದ ಸಾಮಾಗ್ರಿಗಳು & 02 – ನಾಡ ಬಂದೂಕು(ಎಸ್.ಬಿ.ಬಿ.ಎಲ್) ಹಾಗೂ ನಾಡ ಪಿಸ್ತೂಲ್ ಅನ್ನು ವಶಪಡಿಸಿಕೊಂಡು ಆರೋಪಿ ಬಂದಿಸಲಾಗಿದೆ ಎಂದು ತಿಳಿದು ಬಂದಿದೆ, ಅಲ್ಲದೆ ಆರೋಪಿಯಿಂದ ಬಂದೂಕುಗಳನ್ನು ಖರೀದಿ ಮಾಡಿದ್ದ ಎನ್.ಜೆ.ಶಿವರಾಮ, ಎಸ್.ರವಿ, ಕೋಟಿ, ಎಂಬ ಮೂವರು ಆರೋಪಿಗಳನ್ನು ಬಂದಿಸಲಾಗಿದೆ.ಶ್ರೀ ಮಹೇಶ್ ಕುಮಾರ್, ಡಿಎಸ್‌ಪಿ, ಮಡಿಕೇರಿ ಉಪವಿಭಾಗ, ಶ್ರೀ ಅನೂಪ್ ಮಾದಪ್ಪ,

ಸಿಪಿಐ, ಮಡಿಕೇರಿ ಗ್ರಾಮಾಂತರ ವೃತ್ತ, & ಶ್ರೀಮತಿ ಶೋಭಾ ಲಾಮಾಣಿ, ಪಿಎಸ್‌ಐ, ಭಾಗಮಂಡಲ
ಪೊಲೀಸ್ ಠಾಣೆ ಹಾಗೂ ಸಿಬ್ಬಂದಿಗಳ ವಿಶೇಷ ತಂಡವನ್ನು ರಚಿಸಿ ತನಿಖೆ ಕೈಗೊಂಡು ಮಾಹಿತಿ ಸಂಗ್ರಹಿಸಿ ದಾಳಿ ನಡೆಸಲಾಗಿದೆ.

ಬಂದಿತರಿಂದ ಒಟ್ಟು 05 ನಾಡ ಬಂದೂಕು (ಎಸ್.ಬಿ.ಬಿ.ಎಲ್) ಹಾಗೂ 01 ಪಿಸ್ತೂಲ್ ಅನ್ನು ವಶಪಡಿಸಿಕೊಳ್ಳಲಾಗಿರುತ್ತದೆ.

