ಪುತ್ತೂರು ಸ್ಕೂಟರ್ ಸವಾರನ ಮೇಲೆ ಕಾಡು ಹಂದಿ ದಾಳಿ, ಗಂಭೀರ ಗಾಯ..!

ಪುತ್ತೂರು ಸ್ಕೂಟರ್ ಸವಾರನ ಮೇಲೆ ಕಾಡು ಹಂದಿ ದಾಳಿ, ಗಂಭೀರ ಗಾಯ..!

ಪುತ್ತೂರು, ಆಗಸ್ಟ್.20:  ಸ್ಕೂಟರ್ ಸವಾರನೋರ್ವನ ಮೇಲೆ ಕಾಡು ಹಂದಿಯೊಂದು ದಾಳಿ ನಡೆಸಿ ಗಾಯಗೊಳಿಸಿದ ಘಟನೆ ಇಂದು ಮಂಗಳವಾರ ಮುಂಜಾನೆ ದಕ್ಷಿಣ ಕನ್ನಡದ ಪುತ್ತೂರು ತಾಲೂಕು ಅರಿಯಡ್ಕ ಗ್ರಾಮದ ಕೌಡಿಚ್ಚಾರು ಸಮೀಪ ನಡೆದಿದೆ.

ಸ್ಥಳೀಯ ನಿವಾಸಿ ಧನುಷ್(30) ಕಾಡು ಹಂದಿ ದಾಳಿಯಿಂದ ಗಾಯಗೊಂಡವರಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.  ಕುಂಬ್ರ ಪೆಟ್ರೋಲ್ ಬಂಕ್ ನಲ್ಲಿ ಮ್ಯಾನೇಜರ್ ಆಗಿರುವ ಧನುಷ್ ಎಂದಿನಂತೆ ಇಂದು ಬೆಳಗ್ಗೆ ಸ್ಕೂಟರಿನಲ್ಲಿ  ಪೆಟ್ರೋಲ್ ಬಂಕ್ ಗೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಕುರುಂಜ ಮಣ್ಣಾಪು ತಲುಪಿದಾಗ ಏಕಾಏಕಿ ಕಾಡು ಹಂದಿಯೊಂದು ಧನುಷ್ ಚಲಾಯಿಸುತ್ತಿದ್ದ ಸ್ಕೂಟರ್ ಮೇಲೆ ಎರಗಿದೆ. ಈ ವೇಳೆ ನಿಯಂತ್ರಣ ತಪ್ಪಿ ಕೆಳಗೆ ಬಿದ್ದ ಧನುಷ್ ಮೇಲೆ ಎರಗಿದ ಕಾಡುಹಂದಿ, ಅವರ ಬಲ ಕೈ ಸೇರಿ  ದೇಹದ ಇತರ ಭಾಗಗಳಿಗೆ ಕಚ್ಚಿ ಗಾಯಗೊಳಿಸಿದೆ. ಗಾಯಾಳುವನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ

ರಾಜ್ಯ