
ಕೆವಿಜಿ ಅಮರಜ್ಯೋತಿಯ ವಿಜ್ಞಾನ ವಿಭಾಗದಲ್ಲಿ ಡಾ.ಸುರೇಶ್ ಮತ್ತು ದಾಕ್ಷಯಿಣಿ ದಂಪತಿಗಳ ಪುತ್ರಿ ಬೃಂದಾ ಸುರೇಶ್ 589 ಅಂಕ ಪಡೆದು ರಾಜ್ಯಕ್ಕೆ 11ನೇ ರ‌್ಯಾಂಕ್ ಹಾಗೂ ವಾಣಿಜ್ಯ ವಿಭಾಗದಲ್ಲಿ ಹೇಮಪ್ರಕಾಶ್ ಮತ್ತು ವಂದನಾ ದಂಪತಿಗಳ ಪುತ್ರಿ ಸಂಜನಾ ರಾವ್ ಹೆಚ್ ರವರು 591 ಅಂಕ ಪಡೆದು ರಾಜ್ಯಕ್ಕೆ 7ನೇ ರ‌್ಯಾಂಕ್ ಪಡೆದಿರುತ್ತಾರೆ. ಇವರನ್ನು ಕಾಲೇಜಿನ ಮ್ಯಾನೇಜಿಂಗ್ ಟ್ರಸ್ಟಿ ಡಾ. ರೇಣುಕಾ ಪ್ರಸಾದ್ ಕೆ ವಿ ಹಾಗೂ ಟ್ರಸ್ಟಿ ಡಾ.ಜ್ಯೋತಿ ಆರ್ ಪ್ರಸಾದ್ ಮತ್ತು ಕಾಲೇಜಿನ ಸಿಇಒ ಡಾ. ಉಜ್ವಲ್ ಯು ಜೆ ರವರು ಸನ್ಮಾನಿಸಿ ಪ್ರೋತ್ಸಾಹ ಧನವನ್ನು ನೀಡಿದರು ಹಾಗೂ ಮುಂದಿನ ಭವಿಷ್ಯಕ್ಕೆ ಶುಭ ಹಾರೈಸಿದರು.


ಕಾರ್ಯಕ್ರಮದಲ್ಲಿ ಕಾಲೇಜಿನ ಸಿಇಒ ಡಾ. ಉಜ್ವಲ್ ಯು ಜೆ ರವರು ಮಾತನಾಡಿ ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿಯನ್ನು ಸುಳ್ಯ ತಾಲೂಕಿನ ವಿದ್ಯಾರ್ಥಿಗಳಿಗೆ ದೊರಕಿಸಿಕೊಟ್ಟ ಕಾಲೇಜಿನಲ್ಲಿ ಮ್ಯಾನೇಜಿಂಗ್ ಟ್ರಸ್ಟಿ ಡಾ. ರೇಣುಕಾ ಪ್ರಸಾದ್ ಕೆವಿ ಅವರಿಗೆ ಅಭಿನಂದನೆಗಳನ್ನು ತಿಳಿಸಿದರು.ಹಾಗೂ ಬೃಂದಾ ಸುರೇಶ್ ರವರಿಗೆ ಕೆವಿಜಿ ಕಾಲೇಜ್ ಆಫ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಉಚಿತ ಶಿಕ್ಷಣ ನೀಡುವುದಾಗಿ ತಿಳಿಸಿದರು.ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಯಶೋದಾ ರಾಮಚಂದ್ರ, ಉಪ ಪ್ರಾಂಶುಪಾಲರಾದ ದೀಪಕ್ ವೈ ಆರ್ ಹಾಗೂ ಕಾಲೇಜಿನ ಎಲ್ಲಾ ಉಪನ್ಯಾಸಕರು,ಕೆವಿಜಿ ಕಾಲೇಜ್ ಆಫ್ ಇಂಜಿನಿಯರಿಂಗ್ ನ ಪ್ರಾಂಶುಪಾಲರಾದ ಡಾ.ಸುರೇಶ್ ವಿ ಪ್ರಸನ್ನ ಕಲ್ಲಾಜೆ, ವಸಂತ ಕಿರಿಭಾಗ ಹಾಗೂ ಕಮಲಾಕ್ಷ ನಂಗಾರು,ಹಾಗೂ ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು.

