ನಟ ದರ್ಶನ್‌ಗೆ ವಿಶೇಷ ಸೌಲಭ್ಯ : 7 ಜೈಲ್‌ ಅಧಿಕಾರಿಗಳು ಸಸ್ಪೆಂಡ್‌ 

ನಟ ದರ್ಶನ್‌ಗೆ ವಿಶೇಷ ಸೌಲಭ್ಯ : 7 ಜೈಲ್‌ ಅಧಿಕಾರಿಗಳು ಸಸ್ಪೆಂಡ್‌ 

ಬೆಂಗಳೂರು: ಕೊಲೆ ಆರೋಪಿ ನಟ ದರ್ಶನ್‌ಗೆ ಕೇಂದ್ರ ಕಾರಾಗೃಹದಲ್ಲಿ ಸಕಲ ಸೌಲಭ್ಯ ಮಾಡಿಕೊಟ್ಟ ಫೋಟೊ ಬಯಲಾದ ಬೆನ್ನಿಗೆ ಕೆಲವು ಅಧಿಕಾರಿಗಳ ತಲೆದಂಡವಾಗಿದೆ. ಜೈಲಿನ ಏಳು ಅಧಿಕಾರಿಗಳನ್ನು ಅಮಾನತು ಮಾಡಿ ಗೃಹ ಸಚಿವ ಜಿ.ಪರಮೇಶ್ವರ್‌ ಆದೇಶ ಹೊರಡಿಸಿದ್ದಾರೆ. ಜೈಲಿನಲ್ಲಿರುವ ದರ್ಶನ್‌ ರೌಡಿಗಳ ಜೊತೆಗೆ ಕುರ್ಚಿಯಲ್ಲಿ ಕುಳಿತು ಕಾಫಿ ಕುಡಿಯುತ್ತಾ ಸಿಗರೇಟು ಸೇದುತ್ತಿರುವ ಫೋಟೊ ನಿನ್ನೆ ಬಹಿರಂಗವಾದ ಬಳಿಕ ನಟನಿಗೆ ಜೈಲಿನಲ್ಲಿ ರಾಜಾತಿಥ್ಯ ದೊರೆಯುತ್ತಿರುವ ವಿಷಯ ಬಯಲಾಗಿತ್ತು. ಇದರ ಬೆನ್ನಿಗೆ ದರ್ಶನ್‌ ಜೈಲಿನಿಂದಲೇ ವೀಡಿಯೊ ಕಾಲ್‌ನಲ್ಲಿ ಮಾತನಾಡಿರುವ ವಿಚಾರವೂ ಬಹಿರಂಗಗೊಂಡು ಸರಕಾರ ತೀವ್ರರ ಮುಜುಗರಕ್ಕೀಡಾಗಿದೆ.ಜೈಲರ್​​​ಗಳಾದ ಶರಣಬಸವ ಅಮೀನ್​​ಗಢ, ಖಂಡೇವಾಲ್, ಸಹಾಯಕ ಜೈಲರ್​ಗಳಾದ ಪುಟ್ಟಸ್ವಾಮಿ, ಶ್ರೀಕಾಂತ್​ ತಲವಾರ್​, ಜೈಲಿನ ಹೆಡ್​​ ವಾರ್ಡರ್‌​ಗಳಾದ ವೆಂಕಪ್ಪ, ಸಂಪತ್, ವಾರ್ಡರ್​​​ ಬಸಪ್ಪ ಅವರನ್ನು ಅಮಾನತುಗೊಳಿಸಲಾಗಿದೆ.ಈ ಪ್ರಕರಣದಲ್ಲಿ ಏಳು ಅಧಿಕಾರಿಗಳನ್ನು ನಾವು ಸಸ್ಪೆಂಡ್ ಮಾಡಿದ್ದೇವೆ. ನಾನು ವರದಿಯನ್ನು ಕೇಳಿದ್ದೇನೆ. ಈ ರೀತಿಯ ಘಟನೆ ನಡೆಯಬಾರದು. ಕೆಲವರನ್ನು ಸಸ್ಪೆಂಡ್ ಮಾಡಿದ್ದು, ಮುಂದಿನ ಕ್ರಮ ಕೈಗೊಳ್ಳುತ್ತೇವೆ. ಮೇಲಧಿಕಾರಿಗಳನ್ನು ಟ್ರಾನ್ಸ್​ಫರ್​​ ಮಾಡ್ತೇನೆ. ಪದೇಪದೆ ಈ ರೀತಿ ಆಗಬಾರದು. ಎಲ್ಲ ಬಂಧಿಖಾನೆಗಳಲ್ಲಿ ಸಿಸಿಟಿವಿ ಹಾಕುತ್ತಿದ್ದೇವೆ. ಜಾಮರ್ ಹಾಕಲಾಗುತ್ತಿದೆ. ಆದಾಗ್ಯೂ ಈ ರೀತಿಯ ಘಟನೆ ನಡೆಯುತ್ತಿದೆ ಎಂದು ಪರಮೇಶ್ವರ್ ಬೇಸರ ವ್ಯಕ್ತಪಡಿಸಿದ್ದಾರೆ.

ಮೇಲಧಿಕಾರಿಗಳು ಈ ಪ್ರಕರಣದಲ್ಲಿ ನೇರವಾಗಿ ಭಾಗಿಯಾಗಿದ್ದರೆ ಅವರನ್ನು ತೆಗೆದು ಹಾಕುತ್ತೇವೆ. ವರದಿ ಬಂದ ನಂತರ ಈ ಬಗ್ಗೆ ಕ್ರಮ ಕೈಗೊಳ್ಳುತ್ತೇವೆ ಎಂದು ಪರಮೇಶ್ವರ್ ಅವರು ಭರವಸೆ ನೀಡಿದ್ದಾರೆ. ದರ್ಶನ್​ಗೆ ಚಿಕನ್ ಬಿರಿಯಾನಿ ಕೊಟ್ಟಿಲ್ಲ. ಜೈಲಿನ ನಿಯಮದಂತೆ ನಡೆಯಲಾಗುತ್ತಿದೆ. ಈಗ ನಡೆದ ಘಟನೆ ಸಮರ್ಥಿಸಿಕೊಳ್ಳುತ್ತಿಲ್ಲ ಎಂದಿದ್ದಾರೆ ಪರಮೇಶ್ವರ್.

ಜೈಲಿನಲ್ಲಿ ಜಾಮರ್ ಹಾಕಿ ಹೈ ಪ್ರೀಕ್ವೆನ್ಸಿ ಇಡಲಾಗಿತ್ತಂತೆ. ಇದರಿಂದ ಪಕ್ಕದ ಏರಿಯಾಗಳಿಗೆ ತೊಂದರೆ ಆಗಿತ್ತು. ಹೀಗಾಗಿ, ಸದ್ಯ ಪ್ರೀಕ್ವೆನ್ಸಿ ಕಡಿಮೆ ಮಾಡಲಾಗಿದೆ. ‘ಫೋಟೋ ಯಾರು ತೆಗೆದರು? ಯಾರ ಮೊಬೈಲ್​ನಲ್ಲಿ ತೆಗದಿದ್ದಾರೆ ಅನ್ನೋದು ಮುಖ್ಯ ಆಗುತ್ತದೆ ಎಂದು ಪರಮೇಶ್ವರ್ ಹೇಳಿದ್ದಾರೆ

ರಾಜ್ಯ