ರಾಜ್ಯ

ಉಪ್ಪಿನಂಗಡಿ ನೇತ್ರಾವತಿ ನದಿದಡದಲ್ಲಿ ಭಾರೀ ಗಾತ್ರ ಮೊಸಳೆ ಪತ್ತೆ 

ಉಪ್ಪಿನಂಗಡಿ: ಭಾರೀ ಗಾತ್ರದ ಮೊಸಳೆಯೊಂದು ಉಪ್ಪಿನಂಗಡಿ ಹೊಸ ಬಸ್ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಸ್ಥಳೀಯ ಜನರ ಆತಂಕಕ್ಕೆ ಕಾರಣವಾಗಿದೆ.

ಮಂಗಳವಾರ ಸಂಜೆ ಇಳಂತಿಲ ಗ್ರಾ. ಪಂ. ಎಪ್ತಿಯ ನದಿಯ ಮತ್ತೊಂದು ಬದಿಯಲ್ಲಿ ಮೊಸಳೆಯೊಂದು ಮರಳ ದಿಬ್ಬದಲ್ಲಿ ವಿರಮಿಸುತ್ತಿರುವುದನ್ನು ಇಳಂತಿಲ ಗ್ರಾ.ಪಂ. ಮಾಜಿ ಸದಸ್ಯ, ಸಾಮಾಜಿಕ ಕಾರ್ಯಕರ್ತರೊಬ್ಬರು ಗಮನಿಸಿದ್ದು, ಫೋಟೋವನ್ನು ಕ್ಲಿಕ್ಕಿಸಿದ್ದಾರೆ. ದೊಡ್ಡ ಗಾತ್ರದ ಮೊಸಳೆ ಇದಾಗಿದೆ. ಕಳೆದ 2022ರ ಸೆಪ್ಟೆಂಬರ್ ತಿಂಗಳಲ್ಲಿ ಪಂಜಳದ ಪೆಟ್ರೋಲ್ ಪಂಪ್ ಸಮೀಪ ನೇತ್ರಾವತಿ ನದಿಯಲ್ಲಿ ಮೂರು ಮೊಸಳೆಗಳು ಕಂಡು ಬಂದಿದ್ದವು. ಮಧ್ಯಾಹ್ನ ಹೊತ್ತಿನಲ್ಲಿ ನದಿ ಮಧ್ಯದಲ್ಲಿ ಇರುವ ಕುರುಚಲು ಹುಲ್ಲನ್ನು ಹೊಂದಿರುವ ಮರಳ ದಿಬ್ಬದ ಮೇಲೆ ಈ ಮೊಸಳೆಗಳು ವಿಶ್ರಾಂತಿ ಪಡೆಯುವುದು ಕಂಡು ಬಂದಿತ್ತು. ಇದರಲ್ಲಿ ಒಂದು ಮೊಸಳೆ ದೊಡ್ಡ ಗಾತ್ರದಾದರೆ, ಇನ್ನೆರಡು ಮೊಸಳೆಗಳು ಅದಕ್ಕಿಂತ ಸ್ವಲ್ಪ ಸಣ್ಣ ಗಾತ್ರದವಾಗಿದ್ದವು.

ಆದರೆ ನಿನ್ನೆ ಒಂದು ಮೊಸಳೆ ಮಾತ್ರ ಕಂಡು ಬಂದಿದೆ. ನೇತ್ರಾವತಿ ನದಿಯಲ್ಲಿ ಮೊಸಳೆಗಳ ವಾಸ ಇವೆ ಎನ್ನುವುದಕ್ಕೆ ಇದು ಪುಷ್ಠಿ ನೀಡಿದೆ

Leave a Response

error: Content is protected !!