
ಸುಳ್ಯ:ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಕೋಲ್ಚಾರು ಸ.ಹಿ.ಪ್ರಾ.ಶಾಲೆಗೆ ರಾಜ್ಯದ ಅತ್ಯುತ್ತಮ ಸರಕಾರಿ ಪ್ರಾಥಮಿಕ ಶಾಲೆ ಪ್ರಶಸ್ತಿ ಬಂದಿರುವ ಹಿನ್ನಲೆಯಲ್ಲಿ ಗ್ರಾಮಸ್ಥರು ಸಂಭ್ರಮಾಚರಣೆ ನಡೆಸಿದ್ದಾರೆ. ಸುಳ್ಯ ನಗರದಲ್ಲಿ ಶಾಲಾ ವಿದ್ಯಾರ್ಥಿಗಳು, ಶಿಕ್ಷಕ ವೃಂದ, ಎಸ್‌ಡಿಎಂಸಿಯವರು ಗ್ರಾಮಸ್ಥರು ಸುಳ್ಯದ ಜ್ಯೋತಿ ವೃತ್ತದಿಂದ ಗಾಂಧಿನಗರ ಆಕರ್ಷಕ ಮೆರವಣಿಗೆ ನಡೆಸಿದರು.


ಮೆರವಣಿಗೆಯನ್ನು ಸುಳ್ಯ ನಗರ ಪಂಚಾಯತ್ ಅಧ್ಯಕ್ಷೆ ಶಶಿಕಲಾ ನೀರಬಿದಿರೆ ಕನ್ನಡದ ಧ್ವಜ ಬೀಸುವುದರ ಮೂಲಕ ಉದ್ಘಾಟಿಸಿದರು. ನ.ಪಂ. ಉಪಾಧ್ಯಕ್ಷ ಬುದ್ಧ ನಾಯ್ಕ, ಐಎಂಎ ಅಧ್ಯಕ್ಷೆ ಡಾ. ವೀಣಾ, ಅಕ್ಷರ ದಾಸೋಹ ಅಧಿಕಾರಿ ವೀಣಾ ಸತೀಶ್ ಕೊಯಿಂಗಾಜೆ, ಯುವಜನ ಸಂಯುಕ್ತ ಮಂಡಳಿ ಅಧ್ಯಕ್ಷ ಪ್ರವೀಣ್ ಜಯನಗರ ಮೊದಲಾದವರು ಶುಭಾಸಂಸನೆಗೈದರು. ಯುವಜನ ಸಂಯುಕ್ತ ಮಂಡಳಿ ವತಿಯಿಂದ ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರಿಗೆ ಹಾಗೂ ಎಸ್‌ಡಿಎಂಸಿ ಅಧ್ಯಕ್ಷರಿಗೆ ಶಾಲು ಹೊದಿಸಿ ಗೌರವ ಸಲ್ಲಿಸಲಾಯಿತು
