
ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಪುತ್ತೂರಿನ ಬೊಳುವಾರಿನಲ್ಲಿರುವ ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಇಂದು ಮುಂಜಾನೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿದ್ದು ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮೀಟರ್ ಬೋರ್ಡ್ನಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಜಂಕ್ಷನ್ ಬಾಕ್ಸ್ ಪೂರ್ಣ ಸುಟ್ಟು ಹೋಗಿದೆ. ಆಸ್ಪತ್ರೆಯೊಳಗೆ ಹೊಗೆ ಆವರಿಸಿದ್ದುಅಗ್ನಿಶಾಮಕದವರು ಸಕಾಲದಲ್ಲಿ ಬಂದು ಕಾರ್ಯಾಚರಣೆ ನಡೆಸಿದ ಕಾರಣ ಯಾವುದೇ ಅನಾಹುತ ಸಂಭವಿಸಿಲ್ಲ. ರೋಗಿಗಳಿಗೂ ಯಾವುದೇ ತೊಂದರೆಯಾಗಿಲ್ಲ ಎಂದು ಮೂಲಗಳು ತಿಳಿಸಿವೆ
