ಉಪ್ಪಿನಂಗಡಿ| ಬಸ್‌ ಢಿಕ್ಕಿ; ಬೈಕ್‌ ಸವಾರನಿಗೆ ಗಂಭೀರ ಗಾಯ

ಉಪ್ಪಿನಂಗಡಿ| ಬಸ್‌ ಢಿಕ್ಕಿ; ಬೈಕ್‌ ಸವಾರನಿಗೆ ಗಂಭೀರ ಗಾಯ

ಉಪ್ಪಿನಂಗಡಿ: ಕೆಎಸ್ಸಾರ್ಟಿಸಿ ಬಸ್ಸೊಂದು ಓವರ್‍ಟೇಕ್ ಮಾಡುವ ಭರದಲ್ಲಿ ಬೈಕೊಂದಕ್ಕೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸ್ಕಿಡ್ ಆಗಿ ಬಿದ್ದಿದ್ದು, ಬೈಕ್ ಸವಾರನ ಮೇಲೆ ಬಸ್ಸಿನ ಚಕ್ರ ಹರಿದಿದ್ದರಿಂದ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ 34 ನೆಕ್ಕಿಲಾಡಿಯ ಅಂಬೆಲದ ಬಳಿ ಇಂದು ನಡೆದಿದೆ.

ವಿನೋದರ (57) ಎಂಬವರು ಗಾಯಗೊಂಡ ಬೈಕ್ ಸವಾರ. ಉಪ್ಪಿನಂಗಡಿಯಿಂದ ಪುತ್ತೂರಿಗೆ ಹೋಗುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಓವರ್‍ಟೇಕ್ ಮಾಡುವ ಭರದಲ್ಲಿ ಬೈಕ್‍ಗೆ ತಾಗಿದ್ದು, ಆಗ ಬೈಕ್ ಸ್ಕಿಡ್ ಆಗಿ ರಸ್ತೆಗೆ ಬಿದ್ದಿದೆ.

ಬೈಕಿನೊಂದಿಗೆ ರಸ್ತೆಗೆ ಬಿದ್ದ ಬೈಕ್ ಸವಾರನ ಕೈಯ ಮೇಲೆ ಬಸ್‍ನ ಹಿಂಬದಿ ಚಕ್ರ ಹರಿದಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯವಾಗಿದೆ. ಗಾಯಾಳು ವನ್ನು ಪುತ್ತೂರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ

ರಾಜ್ಯ