ಸುಳ್ಯ ಪೋಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಆರೋಪಿ ಪರಾರಿ :ಮೆಡಿಕಲ್ ತಪಾಸಣೆಗೆ ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆತಂದ ವೇಳೆ ನಡೆದ ಘಟನೆ
![](https://newsroomfirst.com/wp-content/uploads/2024/10/images-23.jpeg)
![](https://newsroomfirst.com/wp-content/uploads/2024/10/images-23.jpeg)
ಸುಳ್ಯ : ಸ್ಟೇಷನಿಗೆ ಕರೆ ತಂದ ಆರೋಪಿ ಪೋಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಪರಾರಿಯಾದ ಘಟನೆ ದಕ್ಷಿಣ ಕನ್ನಡದ ಸುಳ್ಯ (sullia) ಪೊಲೀಸ್ ಠಾಣೆಯಲ್ಲಿ ನಡೆದಿದೆ.
ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ ಠಾಣೆಗೆ ಕರೆ ತಂದಿದ್ದರು. ಆದ್ರೆ ಪೋಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಪರಾರಿಯಾಗಿದ್ದಾನೆ. ಸುಳ್ಯ ಪೋಲೀಸ್ ಠಾಣೆಯ ಪ್ರಕರಣವೊಂದರ ಆರೋಪಿ ನ್ಯಾಯಾಲಯಕ್ಕೆ ಹಾಜರಾಗದೆ ಹಲವು ತಿಂಗಳ ಕಾಲ ತಲೆಮರೆಸಿಕೊಂಡಿದ್ದ.ಇಂದು ಮಧ್ಯಾಹ್ನ ಆರೋಪಿಯನ್ನು ಬಂಧಿಸಿ ಠಾಣೆಗೆ ಕರೆ ತಂದಿದ್ದರು. ಬಳಿಕ ಮೆಡಿಕಲ್ ತಪಾಸಣೆಗೆ ಸುಳ್ಯ ಸರಕಾರಿ ಆಸ್ಪತ್ರೆಗೆ ಪೊಲೀಸರು ಕೊಂಡೊಯ್ದಿದ್ದರು. ಆದ್ರೆ ಆರೋಪಿ ಆಸ್ಪತ್ರೆಯಿಂದಲೇ ಎಸ್ಕೇಪ್ ಆಗಿದ್ದಾನೆ. ಆರೋಪಿಗಾಗಿ ಮತ್ತೆ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.
![](https://newsroomfirst.com/wp-content/uploads/2024/10/images-22-1.jpeg)
add a comment