ಅರಣ್ಯಾಧಿಕಾರಿ ಸಂಜೀವ ಪೂಜಾರಿ ಬೆಳ್ಳಾರೆ ಪೊಲೀಸ್ ವಶಕ್ಕೆ | ಹಿಂಜಾವೇ ಪ್ರತಿಭಟನೆಗೆ ಮಣಿದ ಪೊಲೀಸ್ ಇಲಾಖೆ 

ಅರಣ್ಯಾಧಿಕಾರಿ ಸಂಜೀವ ಪೂಜಾರಿ ಬೆಳ್ಳಾರೆ ಪೊಲೀಸ್ ವಶಕ್ಕೆ | ಹಿಂಜಾವೇ ಪ್ರತಿಭಟನೆಗೆ ಮಣಿದ ಪೊಲೀಸ್ ಇಲಾಖೆ 

ಪುತ್ತೂರು: ಬಿಲ್ಲವ ಸಮುದಾಯದ ಹೆಣ್ಣು ಮಕ್ಕಳ ಕುರಿತು ನಾಲಗೆ ಹರಿಬಿಟ್ಟ ಸಂಜೀವ ಪೂಜಾರಿ ವಿರುದ್ಧ ಹಿಂದೂ ಜಾಗರಣ ವೇದಿಕೆ ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಪಂಜ ಉಪವಲಯ ಅರಣ್ಯ ಅಧಿಕಾರಿ ಸಂಜೀವ ಪೂಜಾರಿ ಕಾಣಿಯೂರು ಅವರನ್ನು ಬೆಳ್ಳಾರೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಯುವತಿಯರು ಹಾಗೂ ಭಜನೆ ಕುರಿತು ಅವರು ಕೀಳುಮಟ್ಟದ ಹೇಳಿಕೆ ನೀಡಿದ್ದನ್ನು ವಿರೋಧಿಸಿ ಬೆಳ್ಳಾರೆ ಠಾಣೆಯಲ್ಲಿ ಗುರುವಾರ ಸಂಜೀವ ಪೂಜಾರಿ ವಿರುದ್ಧ ಪ್ರಕರಣ ದಾಖಲಾಗಿತ್ತು.

ಇಂದು ಪುತ್ತೂರು ಡಿವೈಎಸ್ಪಿ ಕಚೇರಿ ಮುಂಭಾಗ ಹಿಂದೂ ಜಾಗರಣ ವೇದಿಕೆ ವತಿಯಿಂದ ಬೃಹತ್ ಪ್ರತಿಭಟನೆ ನಡೆದು ಇಂದು ಸಂಜೆಯೊಳಗೆ ಬಂಧನವಾದಿದ್ದಲ್ಲಿ ಮುಂದೆ ಆಗುವ ಅನಾಹುತಕ್ಕೆ ಪೊಲೀಸ್ ಇಲಾಖೆ ಹೊಣೆಯಾಗಲಿದೆ ಎಂಬ ಎಚ್ಚರಿಕೆ ನೀಡಲಾಗಿತ್ತು. ಈ ಬೆನ್ನಲ್ಲೇ  ಅವರನ್ನು ಬೆಳ್ಳಾರೆ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ

ರಾಜ್ಯ