
71ನೇ ಅಖಿಲ ಭಾರತ ಸಹಕಾರ ಸಪ್ತಾಹ ಅಂಗವಾಗಿ ವಿಕಸಿತ ಭಾರತ ನಿರ್ಮಾಣದಲ್ಲಿ ಸಹಕಾರ ಸಂಘಗಳ ಪಾತ್ರ ಎಂಬ ವಿಷಯದ ಮೇಲೆ ಹೈಸ್ಕೂಲ್ ವಿಧ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆಯನ್ನು ದಿನಾಂಕ 18/11/2024ರ ಸೋಮವಾರದಂದು ಏರ್ಪಡಿಸಲಾಯಿತು. ಕಾರ್ಯಕ್ರಮದಲ್ಲಿ ಸಹಕಾರ ಸಂಘದ ಅಧ್ಯಕ್ಷರಾದ ಶ್ರೀ ನಾಗೇಶ್ ಕುಂದಲ್ಪಾಡಿ ಅವರು ಉಪಾಧ್ಯಕ್ಷರದ ಅಶೋಕ ಪೆರುಮುಂಡ, ನಿರ್ದೇಶಕರುಗಳಾದ ಪ್ರಮೀಳಾ ಬಂಗಾರಕೋಡಿ, ಪುಷ್ಪಾವತಿ ಯಾಪಾರೆ, ಶೇಷಪ್ಪ ಎನ್ ವಿ, ಜಯರಾಮ ಪಿ ಟಿ, ಗ್ರಾಮ ಪಂಚಾಯತ್ ಸದಸ್ಯರಾದ ಉದಯಚಂದ್ರ ಕುಂಬಳಚೇರಿ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಲೋಕೇಶ್ ಹೊದ್ದೆಟ್ಟಿ ಮತ್ತು ಸಿಬ್ಬಂದಿ ವರ್ಗದವರು ಹಾಗೂ ಸದಸ್ಯರು ಉಪಸ್ಥಿತರಿದ್ದರು. ಸ್ಪರ್ಧಾ ಕಾರ್ಯಕ್ರಮದ ತೀರ್ಪುಗಾರರಾಗಿ ಜ್ಯೋತಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ನಾಗರಾಜ್ ರವರು, ಕಂಪ್ಯೂಟರ್ ಶಿಕ್ಷಕಿಯವರಾದ ಚಂದ್ರಮತಿ ಕುಂಬಳಚೇರಿ ಇವರು, ಸಂಸ್ಥೆಯ ಆಂತರಿಕ ಲೆಕ್ಕಪರಿಶೋಧಕರಾದ ಶ್ರೀ ರತ್ನಾಕರ ಗೌಡ ಬಳ್ಳಡ್ಕ ರವರು ಸಹಕಾರ ನೀಡಿದರು. ವಿದ್ಯಾರ್ಥಿಗಳು ಉತ್ತಮವಾಗಿ ವಿಷಯ ಮಂಡನೆ ಮಾಡಿದರು. ಸ್ಪರ್ಧಿಸಿದ ಎಲ್ಲ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಕ ಬಹುಮಾನ ಹಾಗೂ ವಿಜೇತರಾದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡಲಾಯಿತು.




