ವಿಶ್ವ ಚೆಸ್ ಚಾಂಪಿಯನ್ ಶಿಪ್ ಗೆದ್ದು ಇತಿಹಾಸ ನಿರ್ಮಿಸಿದ 18 ಹರೆಯದ ಯುವ ತಾರೆ ಡಿ ಗುಕೇಶ್!

ವಿಶ್ವ ಚೆಸ್ ಚಾಂಪಿಯನ್ ಶಿಪ್ ಗೆದ್ದು ಇತಿಹಾಸ ನಿರ್ಮಿಸಿದ 18 ಹರೆಯದ ಯುವ ತಾರೆ ಡಿ ಗುಕೇಶ್!

ಮಂಗಳೂರು/ನವದೆಹಲಿ : ಭಾರತದ ಯುವ ಚೆಸ್ ಆಟಗಾರ ಡಿ. ಗುಕೇಶ್‌ ಚೀನಾದ ಡಿಂಗ್‌ ಲಿರೆನ್‌ರನ್ನು ಸೋಲಿಸುವ ಮೂಲಕ ವಿಶ್ವ ಚಾಂಪಿಯನ್‌ಶಿಪ್ ಪ್ರಶಸ್ತಿಯನ್ನು ಗೆದ್ದು ಇತಿಹಾಸ ಬರೆದಿದ್ದಾರೆ. ಸಿಂಗಾಪುರದಲ್ಲಿ ನಡೆದ ಚಾಂಪಿಯನ್ ಶಿಪ್ ಪಂದ್ಯಾವಳಿಯಲ್ಲಿ ಈ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ.

18 ವರ್ಷದ ಡಿ.ಗುಕೇಶ್‌ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಗೆದ್ದ ಭಾರತದ ಎರಡನೇ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಭಾರತದ ಚೆಸ್‌ ಮಾಂತ್ರಿಕ ವಿಶ್ವನಾಥನ್ ಆನಂದ್ ಈ ಪ್ರಶಸ್ತಿ ಗೆದ್ದಿರುವ ಮೊದಲ ಆಟಗಾರ.
ಜೊತೆಗೆ, ವಿಶ್ವ ಪ್ರಶಸ್ತಿಗೆ ಅರ್ಹತೆ ಪಡೆದ ಅತ್ಯಂತ ಕಿರಿಯ ಆಟಗಾರ ಎಂಬ ಖ್ಯಾತಿ ಗಳಿಸಿದ್ದಾರೆ.

ಭಾರತದ ಗ್ರಾಂಡ್ ಮಾಸ್ಟರ್ ವಿಶ್ವನಾಥನ್ ಆನಂದ್ ಅವರು ವಿಶ್ವ ಚೆಸ್ ಚಾಂಪಿಯನ್ ಶಿಪ್ ಅನ್ನು 5 ಬಾರಿ ಗೆದ್ದುಕೊಂಡಿದ್ದರು. ಭಾರತಕ್ಕೆ 12 ವರ್ಷಗಳ ಬಳಿಕ ಚೆಸ್ ನಲ್ಲಿ ವಿಶ್ವ ಪ್ರಶಸ್ತಿಯ ಗರಿ ಬಂದಿದೆ.

ಕ್ರೀಡೆ