ಉಪ್ಪಿನಂಗಡಿ : ಮದ್ಯಪಾನ ಮಾಡಿ ಬಸ್ ಚಲಾಯಿಸಿದ ಚಾಲಕ ಪೊಲೀಸ್ ವಶಕ್ಕೆ

ಉಪ್ಪಿನಂಗಡಿ : ಮದ್ಯಪಾನ ಮಾಡಿ ಬಸ್ ಚಲಾಯಿಸಿದ ಚಾಲಕ ಪೊಲೀಸ್ ವಶಕ್ಕೆ

ಉಪ್ಪಿನಂಗಡಿ: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಚಾಲಕ ಮದ್ಯಪಾನ ಮಾಡಿ ಯದ್ವಾತದ್ವ ಬಸ್ ಚಲಾಯಿಸಿ ಪ್ರಯಾಣಿಕರನ್ನು ಭಯಗೊಳಿಸಿ ಘಟನೆ ಉಪ್ಪಿನಂಗಡಿಯಲ್ಲಿ ಭಾನುವಾರ ರಾತ್ರಿ ನಡೆದಿದೆ.

ಪುತ್ತೂರುನಿಂದ ಉಪ್ಪಿನಂಗಡಿಗೆ ಬಂದು ಆಲಂತಾಯಕ್ಕೆ ತೆರಳುವ ಬಸ್‌ ಚಾಲಕ ಮದ್ಯ ಸೇವಿಸಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅಜಾಗರೂಕತೆಯಿಂದ ಬಸ್ ಚಲಾಯಿಸುತ್ತಿದ್ದರಿಂದ ಭಯಗೊಂಡ ಪ್ರಯಾಣಿಕರು ಚೀರಾಡತೊಡಗಿದರು. ಬಸ್‌ನಲ್ಲಿದ್ದ ಪ್ರಯಾಣಿಕರ ಚೀರಾಟ ಕಂಡ ಸ್ಥಳೀಯರು ಬಸ್ ನಿಲ್ಲಿಸಿ ಚಾಲಕನನ್ನು ಬಸ್‌ನಿಂದ ಕೆಳಗಿಳಿಸಿ ತರಾಟೆಗೆ ತೆಗೆದುಕೊಂಡರು. ದೇಹದ ನಿಯಂತ್ರಣ ಕಳೆದುಕೊಂಡಿದ್ದ ಚಾಲಕನ್ನು ಬಳಿಕ ಪೊಲಿಸರ ವಶಕ್ಕೆ ಒಪ್ಪಿಸಲಾಯಿತು.

ರಾಜ್ಯ